ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ಕ್ವಾಂಟಮ್ ಸಿಟಿ ಅಭಿವೃದ್ದಿ ಹಾಗೂ ಸಹಭಾಗಿತ್ವಕ್ಕೆ ಸ್ವಿಟ್ಜರ್ಲೆಂಡ್ ಕಂಪನಿಗಳು ಹಾಗೂ ಸಂಶೋಧನಾ ಸಂಸ್ಥೆಗಳ ಒಲವು ತೋರಿವೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಿಟ್ಜರ್ಲೆಂಡ್ ಪ್ರವಾಸದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಕ್ವಾಂಟಮ್ ಸಂಶೋಧನೆಯಲ್ಲಿ ತೊಡಗಿಕೊಂಡಿರುವ ವಿಶ್ವದ ಪ್ರಮುಖ ಸಂಸ್ಥೆಗಳಾದ ಇಟಿಹೆಚ್ ಜ್ಯೂರಿಚ್, ಸೆರಿ ಸೇರಿದಂತೆ ವಿವಿಧ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಚರ್ಚಿಸಲಾಗಿದೆ. ರಾಜ್ಯದಲ್ಲಿ ಕ್ವಾಂಟಮ್ ಪರಿಣಿತ ಮಾನವ ಸಂಪನ್ಮೂಲ ಅಭಿವೃದ್ದಿಗಾಗಿ ಐಐಎಸ್‌ಸಿ ಜೊತೆಗೂಡಿ ಕೋರ್ಸ್‌ಗಳನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದ್ದಾರೆ.
ಸರ್ಕಾರ ಬೆಂಗಳೂರು ನಗರವನ್ನು ವಿಶ್ವದ ಕ್ವಾಂಟಮ್ ಕ್ಷೇತ್ರದ ಕೇಂದ್ರ ಬಿಂದುವನ್ನಾಗಿಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಬೆಂಗಳೂರಿನಲ್ಲಿ ನಡೆದ ದೇಶದ ಮೊದಲ ಕ್ವಾಂಟಮ್ ಸಮಾವೇಶದಲ್ಲಿ ಘೋಷಿಸಿದಂತೆ ಈಗಾಗಲೇ ಕ್ವಾಂಟಮ್ ಸಿಟಿಗೆ ಭೂಮಿಯನ್ನು ಸರ್ಕಾರ ಮಂಜೂರು ಮಾಡಿದೆ ಎಂದು ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ಕ್ವಾಂಟಮ್ ಸಿಟಿ ಸಹಭಾಗಿತ್ವಕ್ಕೆ ಸ್ವಿಟ್ಜರ್ಲೆಂಡ್ ಕಂಪನಿ, ಸಂಶೋಧನಾ ಸಂಸ್ಥೆಗಳ ಒಲವು!

