ಉತ್ತರ ಪ್ರದೇಶ ಎಲೆಕ್ಷನ್‌ ಫೈಟ್: 159 ಅಭ್ಯರ್ಥಿಗಳ ಪಟ್ಟಿ ರಿಲೀಸ್‌ ಮಾಡಿದ ಸಮಾಜವಾದಿ ಪಾರ್ಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಉತ್ತರಪ್ರದೇಶದಲ್ಲಿ ಯೋಗಿ ಸರ್ಕಾರ ಉರುಳಿಸಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂದಿರುವ ಸಮಾಜವಾದಿ ಪಕ್ಷ ಚುನಾವಣಾ ಅಭ್ಯರ್ಥಿಗಳ ಪಟ್ಟಿ ರಿಲೀಸ್‌ ಮಾಡಿದೆ.
ಉತ್ತರ ಪ್ರದೇಶದ ವಿಧಾನ ಸಭೆಗೆ ಮೊದಲನೇ ಹಂತದ ಚುನಾವಣೆ ಫೆ.10ರಂದು ನಡೆಯಲಿದ್ದು, ಸಮಾಜವಾದಿ ಪಕ್ಷ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.
ಒಟ್ಟು 159 ಅಭ್ಯರ್ಥಿಗಳು ಭಾಗವಹಿಸಲಿದ್ದು, ಅಖಿಲೇಶ್‌ ಯಾದವ್‌ ಕೂಡ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಕರ್ಹಾಲ್‌ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಚುನಾವಣ ಕಣಕ್ಕಿಳಿಯಲಿದ್ದು, ನಹಿತ್‌ ಹಸನ್‌, ಅಬ್ದುಲ್ಲಾ ಅಜಮ್‌ ಖಾನ್‌ ಸೇರಿ ಹಲವು ಪ್ರಮುಖರು ಸ್ಪರ್ಧಿಸಲಿದ್ದಾರೆ.
ಈಗಾಗಲೇ ಬಿಜೆಪಿ, ಕಾಂಗ್ರೆಸ್‌ ಸೇರಿ ಹಲವು ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!