ಹೊಸದಿಗಂತ ವರದಿ, ಮೈಸೂರು:
ಮೈಸೂರಿನಲ್ಲಿ 76 ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ.ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಧ್ವಜಾರೋಹಣ ನೆರವೇರಿಸಿದರು.
ಮೈಸೂರಿನ ಬನ್ನಿಮಂಟಪದ ಕವಾಯತು ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ಅಶ್ವಾರೋಹಿ ದಳದಿಂದ ಅತಿಥಿಗಳಿಗೆ ಗೌರವ ವಂದನೆ ಸಲ್ಲಿಸಲಾಯಿತು.
ತೆರೆದ ವಾಹನದಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ಗೌರವ ವಂದನೆ ಸ್ವೀಕರಿಸಿದರು. ಕೋವಿಡ್ ಹಿನ್ನಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಲಾಯಿತು.
ಅಶ್ವಾರೋಹಿ ದಳ, ಪೊಲೀಸ್ ತುಕಡಿಯಿಂದ ಆಕರ್ಷಕ ಪಥಸಂಚಲನ ನಡೆಯಿತು. ಕೇವಲ 7 ತುಕಡಿ ಮಾತ್ರ ಪಥ ಸಂಚಲನದಲ್ಲಿ ಭಾಗಿಯಾಗಿದ್ದವು.
ಸಾರ್ವಜನಿಕರು, ವಿದ್ಯಾರ್ಥಿಗಳಿಗೂ ಈ ಬಾರಿ ಅವಕಾಶ ನೀಡಿಲ್ಲ.ಕೇವಲ ಧ್ವಜಾರೋಹಣ, ಪರೇಡ್ಗೆ ಮಾತ್ರ ಸೀಮಿತವಾಯ್ತು ಗಣರಾಜ್ಯೋತ್ಸವ.
ಕಾರ್ಯಕ್ರಮದಲ್ಲಿ ಶಾಸಕರಾದ ಜಿ.ಟಿ.ದೇವೇಗೌಡ, ತನ್ವೀರ್ ಸೇಠ್, ಎಲ್. ನಾಗೇಂದ್ರ ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು.