Wednesday, November 5, 2025

ಆವಕದ ಮೂರು ತಿಂಗಳ ಮೊದಲೇ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ: ಸಚಿವ ಶಿವಾನಂದ ಪಾಟೀಲ್ ನಿರ್ದೇಶನ


ಹೊಸದಿಗಂತ ಡಿಜಿಟಲ್ ಡೆಸ್ಕ್:


ಯಾವುದೇ ಕೃಷಿ ಉತ್ಪನ್ನ ಮಾರುಕಟ್ಟೆಗೆ ಆವಕವಾಗುವ ಮೂರು ತಿಂಗಳು ಮುಂಚಿತವಾಗಿ ಮಾರುಕಟ್ಟೆ ಕಲ್ಪಿಸಲು ಯೋಜನೆ ರೂಪಿಸಬೇಕು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.


ಮೆಕ್ಕೆಜೋಳ, ಈರುಳ್ಳಿ ಬೆಲೆ ಕುಸಿತದ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಸಿದ ಅವರು, ಕೊಬ್ಬರಿ ಬೆಲೆ ಕುಸಿತದ ಸಂದರ್ಭದಲ್ಲಿ ತಕ್ಷಣ ಕನಿಷ್ಠ ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ಆರಂಭಿಸಿದ ಪರಿಣಾಮ ಮಾರುಕಟ್ಟೆಯಲ್ಲಿ ಕೊಬ್ಬರಿ ಬೆಲೆ ಕುಸಿತ ನಿಯಂತ್ರಿಸಲು ಸಾಧ್ಯವಾಯಿತು. ಹೀಗಾಗಿ ಕೃಷಿ ಉತ್ಪನ್ನಗಳ ಬೆಲೆ ಕುಸಿತದ ಸಂದರ್ಭದಲ್ಲಿ ತಕ್ಷಣ ಕ್ರಮ ಕೈಗೊಳ್ಳುವ ಬಗ್ಗೆ ಅಧಿಕಾರಿಗಳು ಗಮನಹರಿಸಬೇಕು ಎಂದು ತಿಳಿಸಿದ್ದಾರೆ.


ಕೇಂದ್ರ ಸರ್ಕಾರ ನಿಗದಿಪಡಿಸಿದ ಕನಿಷ್ಟ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿ ಮಾಡಿ ಎಂದು ಸಭೆಯಲ್ಲಿ ಭಾಗವಹಿಸಿದ್ದ ಕೆಎಂಎಫ್ ನಿರ್ದೇಶಕ ಶಿವಸ್ವಾಮಿ ಅವರಿಗೆ ಮನವಿ ಮಾಡಿದರು. ಈರುಳ್ಳಿ ಬೆಳೆಗಾರರನ್ನು ಬೆಲೆ ಕುಸಿತದಿಂದ ಪಾರು ಮಾಡಲು ಪಿಡಿಪಿಎಸ್ ಅಡಿಯಲ್ಲಿ ಖರೀದಿ ಮಾಡುವುದೇ ಈಗ ಇರುವ ಏಕೈಕ ಪರಿಹಾರ ಮಾರ್ಗವಾಗಿದ್ದು, ಕೇಂದ್ರದ ಅನುಮತಿ ಪಡೆಯಬೇಕು ಎಂದು ತಿಳಿಸಿದ್ದಾರೆ.

error: Content is protected !!