Wednesday, November 5, 2025

ಕ್ರಾಂತಿಯೂ ಇಲ್ಲ, ರಾಜ್ಯದಲ್ಲಿ ಮುಖ್ಯಮಂತ್ರಿ ಗಾದಿ ಖಾಲಿಯೂ ಇಲ್ಲ, ಎಲ್ಲವೂ ಊಹಾಪೋಹ ಎಂದ ಸಚಿವ ಬೈರತಿ ಸುರೇಶ್!


ಹೊಸದಿಗಂತ ಡಿಜಿಟಲ್ ಡೆಸ್ಕ್:


ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಸ್ಪಷ್ಟಪಡಿಸಿದ್ದಾರೆ.


ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ರಾಜ್ಯವನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಯಾವ ಕ್ರಾಂತಿಯೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


ಎಲ್ಲವೂ ಊಹಾಪೋಹದ ಸುದ್ದಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಮ್ಮ ಹಕ್ಕು ಅಭಿಪ್ರಾಯ ಮಂಡಿಸಲು ಪ್ರತಿಯೊಬ್ಬರಿಗೂ ಹಕ್ಕಿದೆ. ಇದರ ನೆಲೆಗಟ್ಟಿನಲ್ಲಿ ಹೈಕಮಾಂಡ್ ಸಮರ್ಥ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

error: Content is protected !!