ನಕಲಿ ವೈದ್ಯನಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಹೊಸದಿಗಂತ ವರದಿ, ಶಿವಮೊಗ್ಗ:

ನಕಲಿ ಪರವಾನಿಗೆಯನ್ನು ಸೃಷ್ಟಿಸಿಕೊಂಡು ವೈದ್ಯ ವೃತ್ತಿ ಮಾಡುತ್ತಿದ್ದ ಆರೋಪಿ ಹಕೀಂ ಅಲಿಯಾಸ್ ಡಾ.ಅಮೀರ್ ಜಾನ್‍ಗೆ 2ನೇ ಜೆಎಂಎಫ್‍ಸಿ ನ್ಯಾಯಾಲಯ 3 ವರ್ಷ ಕಾರಾಗೃಹವಾಸ ಮತ್ತು 15 ಸಾವಿರ ರೂ.ದಂಡ ವಿಧಿಸಿ ತೀರ್ಪು ನೀಡಿದೆ.
ನಗರದ ದುರ್ಗಾಮೃತ ಲಾಡ್ಜ್ ನ ರೂಂ ನಂಬರ್ 106 ರಲ್ಲಿ ಯಾವುದೇ ಪರವಾನಿಗೆ ಹೊಂದದೇ ನಕಲಿ ಪರವಾನಿಗೆಯನ್ನು ಸೃಷ್ಟಿಸಿಕೊಂಡು ವೈದ್ಯ ವೃತ್ತಿ ನಡೆಸುತ್ತಿರುವುದು ದಾಳಿಯಿಂದ ಬೆಳಕಿಗೆ ಬಂದಿತ್ತು.
ನಕಲಿ ವೈದ್ಯ ವೃತ್ತಿಗೆ ಬಳಸಿದ ಔಷಧಿಗಳು, ಬೋರ್ಡ್, ಇತರೆ ವಸ್ತುಗಳನ್ನು ವಶಪಡಿಸಿಕೊಂಡು ದೊಡ್ಡಪೇಟೆ ಪೊಲೀಸರು ಪ್ರಕರಣ ದಾಖಲಿಸಿ, ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
2ನೇ ಜೆಎಂಎಫ್‍ಸಿ ನ್ಯಾಯಾಲಯದ ನ್ಯಾಯಾಧೀಶರಾದ ಎಸ್.ಆರ್.ಸನ್ಮತಿ ಜ.25 ರಂದು ವಿಚಾರಣೆ ನಡೆಸಿ ಆರೋಪ ಸಾಬೀತಾಗಿದ್ದರಿಂದ ಶಿಕ್ಷೆ ವಿಧಿಸಿದ್ದಾರೆ.
ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ಜಿ.ಕೆ.ಕಿರಣ್‍ಕುಮಾರ್ ಪ್ರಕರಣದ ವಿಚಾರಣೆ ನಡೆಸಿ ವಾದ ಮಂಡಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!