Wednesday, November 5, 2025

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಬಣ ರಾಜಕಾರಣ ಹೆಚ್ಚಾಗಿದೆ, ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ: ಬಿ.ವೈ. ವಿಜಯೇಂದ್ರ ಆರೋಪ


ಹೊಸದಿಗಂತ ಡಿಜಿಟಲ್ ಡೆಸ್ಕ್:


ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದಲ್ಲಿ ಬಣ ರಾಜಕಾರಣ ಹೆಚ್ಚಾಗಿರುವುದರಿಂದ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ, ರೈತರು, ಬಡವರ ಸಮಸ್ಯೆಗಳ ನಿವಾರಣೆ ಬಗ್ಗೆ ಕಾಳಜಿ ತೋರುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.


ಚಿತ್ರದುರ್ಗದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನಕ್ಕಾಗಿ ಆಡಳಿತ ಪಕ್ಷದ ಸಚಿವರು, ಶಾಸಕರು ಪೈಪೋಟಿ ನಡೆಸುತ್ತಿದ್ದಾರೆ. ಇದರಿಂದಾಗಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಯಾರೊಬ್ಬರೂ ಗಮನಹರಿಸುತ್ತಿಲ್ಲ. ಅತಿವೃಷ್ಟಿಯಿಂದ ಬೆಳೆ ಕಳೆದುಕೊಂಡ ರೈತರಿಗೆ ಪರಿಹಾರ ನೀಡುತ್ತಿಲ್ಲ ಎಂದರು. ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಸಾಧ್ಯವಾಗುತ್ತಿಲ್ಲ. ಖಾತರಿ ಯೋಜನೆಗಳಿಗೂ ಹಣ ಒದಗಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವತ್ತ ಗೃಹ ಸಚಿವರು ಕಾಳಜಿ ತೋರುತ್ತಿಲ್ಲ ಎಂದು ಹೇಳಿದರು.

error: Content is protected !!