ಹೊಸದಿಗಂತ ವರದಿ ಸೋಮವಾರಪೇಟೆ:
ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಾಳು ಮೆಣಸು ಕಳ್ಳತನದ ಎರಡು ಪ್ರತ್ಯೇಕ ಪ್ರಕರಣಗಳನ್ನು ಬೇಧಿಸಿರುವ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಸೋಮವಾರಪೇಟೆ ವೆಂಕಟೇಶ್ವರ ಬ್ಲಾಕ್’ನ ನಿವಾಸಿ ಸುಮಂತ್, ಕಿಬ್ಬೆಟ್ಟ ಗ್ರಾಮದ ಕೀರ್ತಿ, ಕೊಣನೂರು ಗ್ರಾಮದ ಮಣಿಕಂಠ, ಕೆ. ಆರ್. ಪೇಟೆಯ ಸಚಿನ್ ಬಂಧಿತ ಆರೋಪಿಗಳಾಗಿದ್ದು, ಅವರಿಂದ 2.4 ಲಕ್ಷ ಮೌಲ್ಯದ 360 ಕೆ.ಜಿ ಕಾಳು ಮೆಣಸು ಮತ್ತು ಕೃತ್ಯಕ್ಕೆ ಬಳಸಿದ್ದ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಕಾಳು ಮೆಣಸು ಕಳ್ಳತನ: ನಾಲ್ವರು ಆರೋಪಿಗಳು ಅಂದರ್

