ಟೋಯಿಂಗ್ ವಿಚಾರದಲ್ಲಿ ಅತಿರೇಕದ ವರ್ತನೆ ಸಲ್ಲದು : ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟೋಯಿಂಗ್ ವಿಚಾರದಲ್ಲಿ ಅತಿರೇಕದ ವರ್ತನೆ ಸಲ್ಲದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇಂದು ಹುತಾತ್ಮರ ದಿನಾಚರಣೆಯ ಅಂಗವಾಗಿ ಮಹಾತ್ಮಾ ಗಾಂಧೀಜಿಯವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ, ಮಾಧ್ಯಮದವರೊಂದಿಗೆ ಮಾತನಾಡಿದರು.
ಟೋಯಿಂಗ್ ವಿಚಾರದಲ್ಲಿ ಸಾರ್ವಜನಿಕರು ಮತ್ತು ಪೊಲೀಸರ ಮಧ್ಯೆ ಘರ್ಷಣೆ ಶುರುವಾಗುವ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದ್ದು,  ಟೋಯಿಂಗ್ ಬಗ್ಗೆ ಈಗಿರುವ ವ್ಯವಸ್ಥೆ ಬಗ್ಗೆ ಪುನರ್ ಪರಿಶೀಲನೆ ಮಾಡಲಾಗುತ್ತಿದೆ. ಇಲಾಖೆಯೇ ಇದನ್ನು ಮಾಡುತ್ತಿತ್ತು. ಈಗ ಖಾಸಗಿ ಯವರಿಗೆ ಗುತ್ತಿಗೆ ನೀಡಲಾಗಿದೆ ಎಂದರು.

ಹಲವಾರು ಘಟನೆಗಳ ಬಗ್ಗೆ ಗಮನಿಸಲಾಗಿದ್ದು, ಸಾರ್ವಜನಿಕರು ಕಾನೂನಿನ ಪ್ರಕಾರ ನಡೆದುಕೊಳ್ಳಬೇಕು. ಆದರೆ ಕಾನೂನಿನ ರಕ್ಷಣೆ ಮಾಡುವವರು ಸಾರ್ವಜನಿಕರೊಂದಿಗೆ ಅತ್ಯಂತ ಸೌಹಾರ್ದಯುತವಾಗಿ ವರ್ತಿಸಬೇಕು. ಅತಿರೇಕದ ವರ್ತನೆ ಸಹಿಸುವುದಿಲ್ಲ. ಈ ಬಗ್ಗೆ ನಾಳೆ ಪೊಲೀಸ್ ಆಯುಕ್ತರು, ಪೊಲೀಸ್ ಮಹಾ ನಿರ್ದೇಶಕರು ಹಾಗೂ ಟ್ರಾಫಿಕ್ ಪೊಲೀಸ್ ಅಧಿಕಾರಿಗಳ ಸಭೆ ಕರೆದು ಸಂಪೂರ್ಣವಾಗಿ ಪುನರ್ ಪರಿಶೀಲನೆ ಮಾಡಲು ತೀರ್ಮಾನಿಸಲಾಗಿದೆ. ಹಲವಾರು ಬದಲಾವಣೆಗಳನ್ನು ತಂದು ಜನಸ್ನೇಹಿಯಾಗಿಸಲಿದ್ದೇವೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!