ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿ ಶಾಸಕ ಯು ಟಿ ಖಾದರ್ ನೇಮಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿ ಶಾಸಕ ಯು ಟಿ ಖಾದರ್ ನೇಮಕಗೊಂಡಿದ್ದಾರೆ. ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ.
ವಿಧಾನ ಪರಿಷತ್‌ನಲ್ಲಿ ವಿಪಕ್ಷ ನಾಯಕ ಸ್ಥಾನ ಮುಸ್ಲಿಂ ಸಮುದಾಯದ ನಾಯಕನಿಗೆ ತಪ್ಪಿದ ಹಿನ್ನೆಲೆ ವಿಧಾನ ಸಭೆಯಲ್ಲಿ ಉಪನಾಯಕನ ಸ್ಥಾನ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಹೈಕಮಾಂಡ್ ನೀಡಿದೆ.
ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದ ಯುಟಿ ಖಾದರ್, ಅಲ್ಪಸಂಖ್ಯಾತ ಮುಸಲ್ಮಾನ್ ಸಮುದಾಯದ ಪ್ರಮುಖ ನಾಯಕರಾಗಿದ್ದು, ಹೀಗಾಗಿ ಮುಂದಿನ ಚುನಾವಣೆಗಾಗಿ ಪಕ್ಷದಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.
ವಿಧಾನಪರಿಷತ್ ಪ್ರತಿಪಕ್ಷ ಹಾಗೂ ಸಚೇತಕ ಸ್ಥಾನಗಳ ನೇಮಕ ಜೊತೆಗೆ ವಿಧಾನಪರಿಷತ್ ನಾಯಕರನ್ನು ಸಹ ಹೊಸದಾಗಿ ನಿಯೋಜಿಸಲಾಗಿದೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶತಾಯ ಗತಾಯ ಗೆಲುವು ಸಾಧಿಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!