ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರ್ಖಂಡ್‌ನ ಧನ್‌ಬಾದ್ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ವೇಳೆ ಕಲ್ಲಿದ್ದಲು ಗಣಿಗಳು ಕುಸಿದು ನಾಲ್ವರು ಮೃತಪಟ್ಟಿದ್ದಾರೆ. ಮೂರು ಕಲ್ಲಿದ್ದಲು ಗಣಿಗಳು ಬೀಳುವ ವೇಳೆ ಹೆಚ್ಚು ಮಂದಿ ಕಾರ್ಮಿಕರು ಆ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ರಕ್ಷಣಾ ತಂಡದ ಕಾರ್ಯಾಚರಣೆಯಲ್ಲಿ ಮೂವರು ಮಹಿಳೆಯರು ಹಾಗೂ ಒಬ್ಬ ಯುವತಿ ಮೃತದೇಹ ಹೊರತೆಗೆಯಲಾಗಿದೆ. ಉಳಿದವರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಧನ್‌ಬಾದ್‌ನ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಪ್ರೇಮ್ ಕುಮಾರಿ ಹೇಳಿದ್ದಾರೆ. ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಟ್ವೀಟ್ ಮಾಡಿ ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.