ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಸತ್ ಕಲಾಪಗಳಿಗೆ ಅಡ್ಡಿಪಡಿಸುವ ಪ್ರವೃತ್ತಿ ದೊಡ್ಡ ಸಮಸ್ಯೆ ಎಂದು ರಾಜ್ಯಸಭಾ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು ಹೇಳಿದ್ದಾರೆ. ಸಂಸದೀಯ ಪ್ರಜಾಪ್ರಭುತ್ವದಲ್ಲಿ ನಾಗರಿಕರು ನಂಬಿಕೆ ಇಟ್ಟಿದ್ದಾರೆ. ಇದಕ್ಕೆ ಸೂಕ್ತ ರೀತಿಯಲ್ಲಿ ತಮ್ಮನ್ನು ತಾವು ಪ್ರತಿಬಿಂಬಿಸಕೊಳ್ಳಬೇಕು. ಗಂಭೀರವಾಗಿ ನಡೆದುಕೊಳ್ಳಬೇಕು ಎಂದು ಸದನದ ಸದಸ್ಯರಿಗೆ ಹೇಳಿದ್ದಾರೆ.
ಆರಂಭಿಕ ಭಾಷಣದಲ್ಲಿ, ಮತದಾರರು ಮತದಾನದಲ್ಲಿ ಭಾಗವಹಿಸುವಿಕೆ ಶೇ.50ರಷ್ಟು ಹೆಚ್ಚಾಗಿದೆ. ನಮ್ಮ ನಾಗರಿಕರು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಮುಂದುವರಿಸಿದ್ದಾರೆ ಎಂದು ಹೇಳಿದ್ದಾರೆ. ನಮ್ಮ ನಾಗರಿಕರು ನಮ್ಮ ಮೇಲೆ ಇಟ್ಟಿರುವ ನಂಬಿಕೆಗೆ ಯೋಗ್ಯವಾದ ರೀತಿಯಲ್ಲಿ ನಾವು ನಡೆದುಕೊಳ್ಳುವುದು ಅತಿ ಮುಖ್ಯ ಎಂದಿದ್ದಾರೆ.