ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ 731 ಮಂದಿಗೆ ಕೊರೋನಾ ಪಾಸಿಟಿವ್

ಹೊಸದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಶುಕ್ರವಾರ 731 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 668 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 887 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಸಾವು ಸಂಭವಿಸಿಲ್ಲ.
ಕೇರಳದಲ್ಲಿ 38,684 ಹೊಸ ಪ್ರಕರಣ
ಕೇರಳದಲ್ಲಿ ಶುಕ್ರವಾರ ಹೊಸದಾಗಿ 38,684 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 35,878 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 41,037 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 28 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಶುಕ್ರವಾರ ಶೇಕಡಾ 32.01 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!