ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಸರಣಿ ಏಕದಿನ ಪಂದ್ಯಾವಳಿಗೆ ಚಾಲನೆ ಸಿಗಲಿದೆ.
ಇಂದಿನ ಮೊದಲ ಏಕದಿನ ಪಂದ್ಯ ಅಹ್ಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ನಡೆಯಲಿದ್ದು, ಇದೇ ಮೊದಲ ಬಾರಿಗೆ ರೋಹಿತ್ ಶರ್ಮಾ ತಂಡದ ನಾಯಕನಾಗಿ ಏಕದಿನ ತಂಡವನ್ನು ಮುನ್ನಡೆಸಲಿದ್ದಾರೆ.
ಭಾರತವು ಇಂದು ಆಡುತ್ತಿರುವುದು ಸಾವಿರದ ಏಕದಿನ ಪಂದ್ಯವಾಗಿದೆ. ಅಂತಾರಾಷ್ಟ್ರೀಯ ಕ್ರಿಕೆಟಿನಲ್ಲಿ ಸಾವಿರದ ಪಂದ್ಯವಾಡುತ್ತಿರುವ ಪ್ರಥಮ ತಂಡ ಟೀಂ ಇಂಡಿಯಾದ್ದಾಗಿದೆ. ಈ ರೋಚಕ ಪಂದ್ಯದಲ್ಲಿ ಟೀಂ ಇಂಡಿಯಾದ ಪ್ರದರ್ಶನಕ್ಕೆ ಅಭಿಮಾನಿಗಳು ಕುತೂಹಲದಿಂದ ಕಾದು ನೋಡುತ್ತಿದ್ದಾರೆ.
ಭಾರತ ತಂಡದಲ್ಲಿ ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ, ರಿಷಭ್ ಪಂತ್(ವಿ.ಕೀ), ದೀಪಕ್ ಚಹರ್, ಶಾರ್ದುಲ್ ಠಾಕೂರ್, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಪ್ರಸಿಧ್ ಕೃಷ್ಣ, ಆವೇಶ್ ಖಾನ್, ಇಶಾನ್ ಕಿಶನ್, ಶಾರುಖ್ ಖಾನ್ ಇರಲಿದ್ದಾರೆ.
ಶಿಖರ್ ಧವನ್, ಶ್ರೇಯಸ್ ಅಯ್ಯರ್ ಹಾಗೂ ಋತುರಾಜ್ ಗಾಯಕ್ವಾಡ್ ಗೆ ಕೋವಿಡ್ ತಗುಲಿರುವುದರಿಂದ ಅವರು ಈ ಪಂದ್ಯವಾಳಿ ಆಡುವುದಿಲ್ಲ.