ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಗಲಿದ ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರಿಗೆ ಗೌರವಾರ್ಥವಾಗಿ ಇಂದು ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಬಿಸಿಸಿಐ ನ ಉಪಾಧ್ಯಕ್ಷ ರಾಜೀವ್ ಶುಕ್ಲಾ, ಗುಜರಾತ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ಮೊದಲ ಏಕದಿನ ಪಂದ್ಯ ನಡೆಯುತ್ತಿದ್ದು, ಇದೇ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು ಕಪ್ಪು ಪಟ್ಟಿ ಧರಿಸಿದೆ.
ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ, ಬೌಲ್ ಮಾಡಲು ನಿರ್ಧರಿಸಿದೆ.
ಫೆಬ್ರುವರಿ 9 ಮತ್ತು ಫೆಬ್ರವರಿ 11 ರಂದು ಇದೇ ಮೈದಾನದಲ್ಲಿ ವೆಸ್ಟ್ ಇಂಡೀಸ್ ತಂಡದ ವಿರುದ್ಧ ಭಾರತ ಎರಡು ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಲಿದೆ.
ಲತಾ ಮಂಗೇಶ್ಕರ್ ಅವರಿಗೆ ಕ್ರಿಕೆಟ್ ಮೇಲೆ ಆಸಕ್ತಿ ಹೆಚ್ಚಾಗಿದ್ದು, ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಸೇರಿ ಇತರ ಕ್ರಿಕೆಟಿಗರ ಜತೆ ಉತ್ತಮ ಬಾಂಧವ್ಯ ಹೊಂದಿದ್ದರು. 1983ರಲ್ಲಿ ಭಾರತ ಕಂಡ ಮೊದಲ ವಿಶ್ವಕಪ್ ಗೆಲುವಿಗೆ ಲತಾ ಮಂಗೇಶ್ಕರ್ ಉಚಿತ ಹಾಗೂ ವಿಶೇಷ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟಿದ್ದರು.
ಲತಾ ಮಂಗೇಶ್ಕರ್ ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
In honour of #LataMangeshkar, our players in the match between India & West Indies at the Narendra Modi Stadium in Ahmedabad today, will wear a black band. The National Flag to fly at half-mast: BCCI vice-president Rajeev Shukla pic.twitter.com/HAgvLnt0Xk
— ANI (@ANI) February 6, 2022