ಉಡುಪಿ| ಎಂ.ಜಿ.ಎಂ ಕಾಲೇಜಿನಲ್ಲಿ ಭುಗಿಲೆದ್ದ ಹಿಜಾಬ್ ವಿವಾದ: ಮುಂದಿನ ಆದೇಶದವರೆಗೆ ಕಾಲೇಜಿಗೆ ರಜೆ

ದಿಗಂತ ವರದಿ ಉಡುಪಿ:

ಮಂಗಳವಾರ ನಗರದ ಎಂ.ಜಿ.ಎಂ ಕಾಲೇಜಿನಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿದೆ. ಮುಂದಿನ ಆದೇಶದವರೆಗೆ ಕಾಲೇಜಿಗೆ ರಜೆ ಘೋಷಿಸಲಾಗಿದೆ ಎಂದು ಪ್ರಾಂಶುಪಾಲ ದೇವಿದಾಸ್ ನಾಯ್ಕ್ ಹೇಳಿದ್ದಾರೆ

ಮಂಗಳವಾರ ಸರಕಾರದ ಆದೇಶವನ್ನು ಧಿಕ್ಕರಿಸಿ ಹಿಜಾಬ್ ಧರಿಸಿದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ತರಗತಿ ಪ್ರವೇಶ ನೀಡಬಾರದೆಂದು ಹಿಂದೂ ವಿದ್ಯಾರ್ಥಿಗಳು ಕೇಸರಿ ಪೇಟಾ ಶಾಲು ಧರಿಸಿ ಪ್ರತಿಭಟಿಸಿದರು

ಹಿಂದು ವಿದ್ಯಾರ್ಥಿಗಳು ಜೈ ಶ್ರೀರಾಮ್ ಘೋಷಣೆಯೊಂದಿಗೆ ನಮಗೆ ಸಮಾನತೆ ಬೇಕು ಎಂದು ಪ್ರತಿಭಟಿಸಿದರು. ಕಾಲೇಜಿನಲ್ಲಿ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್, ಡಿವೈಎಸ್ಪಿ ಸುಧಾಕರ್ ನಾಯ್ಕ್, ಉಡುಪಿ ನಗರ ಠಾಣೆ ವೃತ್ತ ನಿರೀಕ್ಷಕ ಪ್ರಮೋದ್ ಕುಮಾರ್ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!