ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಗೆ ಅನುಮೋದನೆ ನೀಡಲು ರಕ್ಷಣಾ ಸಚಿವರಲ್ಲಿ ಮನವಿ ಮಾಡಿದ ಸಿಎಂ

ಹೊಸದಿಗಂತ ಡಿಜಿಟಲ್ ಡೆಸ್ಕ್

ಹೊಸದಿಲ್ಲಿ: ಕರ್ನಾಟಕದ ಸಂಗೊಳ್ಳಿಯಲ್ಲಿ ₹ 189 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯನ್ನು ಸೈನಿಕ ಸ್ಕೂಲ್ ಸೊಸೈಟಿಗೆ ಹಸ್ತಾಂತರಿಸಲು ಅನುವು ಮಾಡಿಕೊಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಲ್ಲಿ ಮನವಿ ಮಾಡಿದರು.

ಹೊಸದಿಲ್ಲಿ ಪ್ರವಾಸದಲ್ಲಿರುವ ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ಇದೇ ವೇಳೆ, ಸಂಗೊಳ್ಳಿಯಲ್ಲಿ ₹ 189 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಮುಕ್ತಾಯದ ಹಂತದಲ್ಲಿದೆ. ಈ ಶಾಲೆಯನ್ನು ಸೈನಿಕ ಸ್ಕೂಲ್ ಸೊಸೈಟಿಗೆ ಹಸ್ತಾಂತರಿಸಲು ಅನುವು ಮಾಡಿಕೊಡುವಂತೆ ಮನವಿ ಮಾಡಿದರು.

ಸೈನಿಕ್ ಸ್ಕೂಲ್ ಸೊಸೈಟಿಯ ಅಧಿಕಾರಿಗಳು ಹಾಗೂ ಬೆಳಗಾವಿ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿಯು ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದೆ. ಸೈನಿಕ ಸ್ಕೂಲ್ ಮಾನದಂಡಗಳ ಪಾಲನೆಗೆ ಕ್ರಮ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶೀಘ್ರವೇ ಈ ಶಾಲೆಯನ್ನು ಸೈನಿಕ್ ಸ್ಕೂಲ್ ಸೊಸೈಟಿಯ ಅಧೀನಕ್ಕೆ ಒಳಪಡಿಸಲು ಅನುಮೋದನೆ ನೀಡುವಂತೆ ಸಿಎಂ ಬಸವರಾಜ ಬೊಮ್ಮಾಯಿ ಕೋರಿದರು.

ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್, ಇತರ ಹಿರಿಯ ಅಧಿಕಾರಿಗಳೂ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!