Tuesday, November 4, 2025

ತಲೆಬುರುಡೆ ಪ್ರಕರಣ: ತಿಮರೋಡಿ, ಗಿರೀಶ್, ಜಯಂತ್, ವಿಠಲ್ ಗೌಡಗೆ ತಾತ್ಕಾಲಿಕ ರಿಲೀಫ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಧರ್ಮಸ್ಥಳ ತಲೆಬುರುಡೆ ಪ್ರಕರಣ ಸಂಬಂಧ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ.ಜಯಂತ್ ಮತ್ತು ವಿಠಲ್ ಗೌಡಗೆ ಕರ್ನಾಟಕ ಹೈಕೋರ್ಟ್​ ತಾತ್ಕಾಲಿಕ ರಿಲೀಫ್​ ನೀಡಿದೆ.

ಧರ್ಮಸ್ಥಳದ ಠಾಣೆಯ FIR ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಮೊಹಮ್ಮದ್ ನವಾಜ್ ಅವರಿದ್ದ ಪೀಠ, ಪರ-ವಿರೋಧ ವಾದ ಆಲಿಸಿ ಪ್ರಕರಣದ ತನಿಖೆಗೆ ನ.12ರವರೆಗೆ ತಡೆ ನೀಡಿ ಆದೇಶಿಸಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಬಾಲನ್​, ಈಗಾಲೇ 9 ಬಾರಿ ನೊಟೀಸ್​ ನೀಡಿ ವಿಚಾರಣೆ ನಡೆಸಲಾಗಿದೆ. BNSS ಸೆಕ್ಷನ್​​ 35(3) ಅಡಿಯಲ್ಲಿ ಸಮನ್ಸ್ ನೀಡಿದ್ದು, ಎಸ್ಐಟಿ ಸಮನ್ಸ್ ನೀಡಿರುವುದು ಕಾನೂನು ಬಾಹಿರ. ನಾವು ಆರೋಪಿಗಳೂ ಅಲ್ಲ, ಸಾಕ್ಷಿಯೂ ಅಲ್ಲವೆಂದು ವಾದ ಮಂಡಿಸಿದ್ದರು. ಈಗಾಗಲೇ 150 ಗಂಟೆಗೂ ಹೆಚ್ಚು ಕಾಲ ಅರ್ಜಿದಾರರ ವಿಚಾರಣೆ ನಡೆಸಲಾಗಿದೆ. ಆರಂಭದಲ್ಲಿ 211(a) ಅಡಿ ಎಫ್‌ಐಆರ್ ದಾಖಲಿಸಿ ನಂತರ ಬೇರೆ ಸೆಕ್ಷನ್ ಸೇರಿಸಿದ್ದಾರೆ ಎಂದು ವಾದಿಸಿದ್ದಾರೆ.

ಎಸ್‌ಐಟಿ ಪರ ಎಸ್‌ಪಿಪಿ ಬಿ.ಎನ್. ಜಗದೀಶ್ ವಾದ ಮಂಡಿಸಿದ್ದು, ಅರ್ಜಿದಾರರ ಪ್ರಚೋದನೆ ಮೇಲೆಯೇ ಚಿನ್ನಯ್ಯ ದೂರು ನೀಡಿದ್ದಾರೆ. ನಂತರ 164 ಹೇಳಿಕೆ ನೀಡಿ ಅರ್ಜಿದಾರರ ಮೇಲೆ ಆರೋಪ ಮಾಡಿದ್ದಾರೆ ಧರ್ಮಸ್ಥಳ ಗ್ರಾಮದ 20 ಕಡೆ ಅಗೆದು ಪರಿಶೀಲನೆ ನಡೆಸಲಾಗಿದ್ದು, ಈಗ ಆರೋಪಿಗಳನ್ನಾಗಿಸಿ ಇವರಿಗೆ ನೊಟೀಸ್ ನೀಡಲಾಗಿದೆ ಎಂದು ನ್ಯಾಯಾಲಕ್ಕೆ ತಿಳಿಸಿದ್ದಾರೆ.

ಅಂತಿಮವಾಗಿ ವಾದ-ಪ್ರತಿವಾದ ಆಲಿಸಿ ಪ್ರಕರಣದ ತನಿಖೆಗೆ ನ.12ರವರೆಗೆ ತಡೆ ನೀಡಿ ಆದೇಶಿಸಿದೆ.

error: Content is protected !!