ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತಕ್ಕೆ ಕೋಟಿ ಕೋಟಿ ಹಣ ವಂಚಿಸಿ ಪರಾರಿಯಾದ ಉದ್ಯಮಿ ವಿಜಯ್ ಮಲ್ಯ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಫೆಬ್ರವರಿ 24ಕ್ಕೆ ಮುಂದೂಡಿದೆ. ಈ ಮೂಲಕ ಮಲ್ಯಗೆ ವೈಯಕ್ತಿಕವಾಗಿ ಅಥವಾ ವಕೀಲರ ಮೂಲಕ ಹಾಜರಾಗಲು 2 ವಾರಗಳ ಸಮಯವನ್ನು ನೀಡಿದೆ.
ಒಂದು ವೇಳೆ ಉದ್ಯಮಿ ಮಲ್ಯ ಹಾಜರಾಗದಿದ್ರೆ, ನ್ಯಾಯಾಲಯವು ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕರೆದೊಯ್ಯುತ್ತದೆ ಎಂದು ಸುಪ್ರೀಂಕೋರ್ಟ್ ಸೂಚಿಸಿದೆ.