ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೊಂಥಾ ಚಂಡಮಾರುತದ ಪರಿಣಾಮ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗಿದೆ. ಇಂದು ಸಹ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
WEATHER | ಬೆಂಗಳೂರಿನಲ್ಲಿಂದು ʼಮೂಡಿʼ ವೆದರ್, ಬೇರೆ ಕಡೆ ಮಳೆಯಂತೆ!

