ಹೊಸದಿಗಂತ ಡಿಜಿಟಲ್ ಡೆಸ್ಕ್
ಉತ್ತರ ಕಾಶ್ಮೀರದ ಬಂಡಿಪೋರಾದಲ್ಲಿ ಶುಕ್ರವಾರ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ಒರ್ವ ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಭದ್ರತಾ ಪಡೆಗಳ ಜಂಟಿ ತಂಡದ ಮೇಲೆ ಭಯೋತ್ಪಾದಕರು ಗ್ರೆನೇಡ್ನಿಂದ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗ್ರೆನೇಡ್ ಸ್ಫೋಟದ ನಂತರ ಗುಂಡು ಹಾರಿಸಲಾಗಿದೆ. ಇನ್ನು ಗಾಯಗೊಂಡ ಎಲ್ಲಾ ಸಿಬ್ಬಂದಿಯನ್ನ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.ಉಗ್ರರಿಗಾಗಿ ಭದ್ರತಾ ಪಡೆಗಳು ಶೋಧ ಕಾರ್ಯ ಆರಂಭಿಸಿದ್ದಾರೆ.