ಹೊಸದಿಗಂತ ವರದಿ,ಕಾಸರಗೋಡು:
ಜಿಲ್ಲೆಯಲ್ಲಿ ಬುಧವಾರ 264 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 204 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 282 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ನಾಲ್ಕು ಮಂದಿ ಸಾವಿಗೀಡಾದರು.
ಕೇರಳದಲ್ಲಿ 12,223 ಹೊಸ ಪ್ರಕರಣ
ಕೇರಳದಲ್ಲಿ ಬುಧವಾರ ಹೊಸದಾಗಿ 12,223 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 11,046 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 21,906 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 25 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಬುಧವಾರ ಶೇಕಡಾ 15.75 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.