ಹೊಸದಿಗಂತ ಡಿಜಿಟಲ್ ಡೆಸ್ಕ್:
ವೆಸ್ಟ್ ಇಂಡೀಸ್ ವಿರುದ್ಧ ಮೊದಲT20 ಪಂದ್ಯದಲ್ಲಿ ಭಾರತ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಆರಂಭಿಕ ಬ್ಯಾಟರ್ ಕೆಎಲ್ ರಾಹುಲ್ ಗಾಯದ ಕಾರಣ ಸರಣಿಯಿಂದ ಹೊರಬಿದ್ದಿರುವುದರಿಂದ ಇಶಾನ್ ಕಿಶನ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಇತ್ತ ಯುವ ಬೌಲರ್ ರವಿ ಬಿಷ್ಣೋಯ್ ಪದಾರ್ಪಣೆ ಮಾಡಿದ್ದಾರೆ.
ವೆಸ್ಟ್ ಇಂಡೀಸ್ : ಬ್ರೆಂಡನ್ ಕಿಂಗ್, ಕೈಲ್ ಮೇಯರ್ಸ್, ನಿಕೋಲಸ್ ಪೂರನ್ (ವಿಕೀ), ರೋವ್ಮನ್ ಪೊವೆಲ್, ಕೀರಾನ್ ಪೊಲಾರ್ಡ್ (ನಾಯಕ), ರಾಸ್ಟನ್ ಚೇಸ್, ರೊಮಾರಿಯೊ ಶೆಫರ್ಡ್, ಅಕೀಲ್ ಹೊಸೈನ್, ಓಡಿಯನ್ ಸ್ಮಿತ್, ಫ್ಯಾಬಿಯನ್ ಅಲೆನ್, ಶೆಲ್ಡನ್ ಕಾಟ್ರೆಲ್
ಭಾರತ: ಇಶಾನ್ ಕಿಶನ್, ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್(ವಿಕೀ), ವೆಂಕಟೇಶ್ ಅಯ್ಯರ್, ದೀಪಕ್ ಚಾಹರ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ರವಿ ಬಿಷ್ಣೋಯ್, ಯುಜ್ವೇಂದ್ರ ಚಾಹಲ್