ಹೊಸದಿಗಂತ ಡಿಜಿಟಲ್ ಡೆಸ್ಕ್:
ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ 6 ವಿಕೆಟ್ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಟೀಂ ಇಂಡಿಯಾ ಮೂರು ಪಂದ್ಯಗಳ ಸರಣಿಯಲ್ಲಿ 1-0 ಯಲ್ಲಿ ಮುನ್ನಡೆ ಪಡೆದುಕೊಂಡಿದೆ.
ರವಿ ಬಿಷ್ಣೋಯ್ ಬೌಲಿಂಗ್ ಮತ್ತು ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್ ಅವರ ಬ್ಯಾಟಿಂಗ್ ನೆರವಿನಿಂದ ಗೆಲುವು ಸಾಧಿಸಿದೆ. ವೆಸ್ಟ್ ಇಂಡೀಸ್ ನೀಡಿದ್ದ 158 ರನ್ಗಳ ಗುರಿಯನ್ನು ಭಾರತ ಬೆನ್ನಟ್ಟಿದ್ದು, ಇನ್ನೂ ಏಳು ಎಸೆತಗಳು ಬಾಕಿ ಇರುವಂತೆಯೇ ನಾಲ್ಕು ವಿಕೆಟ್ ಕಳೆದುಕೊಂಡು ಗುರಿ ತಲುಪಿದೆ.