ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಥಾಣೆಯಲ್ಲಿ ಹಕ್ಕಿ ಜ್ವರ ಭೀತಿ ಹೆಚ್ಚಾಗಿದ್ದು, ಕೋಳಿಗಳನ್ನು ಸಾಮೂಹಿಕವಾಗಿ ಕೊಲ್ಲಲಾಗುತ್ತಿದೆ.
ಸುಮಾರು 25,000 ಹಕ್ಕಿ ಜ್ವರದ ಭೀತಿ ಹಿನ್ನೆಲೆಯಲ್ಲಿ ಕೊಲ್ಲುವ ನಿರ್ಧಾರ ಮಾಡಲಾಗುವುದು. ಥಾಣೆ ಜಿಲ್ಲೆಯ ಶಹಾಪುರ ತಹಸಿಲ್ನ ವೆಹ್ಲೋಲಿ ಗ್ರಾಮದ ಫಾರಂನಲ್ಲಿ ಸುಮಾರು ನೂರು ಕೋಳಿಗಳು ಹಠಾತ್ ಮೃತಪಟ್ಟ ನಂತರ ಈ ಕ್ರಮಕ್ಕೆ ಮುಂದಾಗಲಾಗಿದೆ.
ಥಾಣೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಜಿಲ್ಲಾಧಿಕಾರಿ ರಾಜೇಶ್ ಜೆ. ನಾರ್ವೇಕರ್ ಅವರು ಸೋಂಕನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಶುಸಂಗೋಪನಾ ಇಲಾಖೆಗೆ ಆದೇಶಿಸಿದ್ದಾರೆ. ಮೃತಪಟ್ಟ ಪಕ್ಷಿಗಳ ಮಾದರಿಗಳನ್ನು ಪರೀಕ್ಷೆಗಾಗಿ ಪುಣೆ ಮೂಲದ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.