ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಇಂದು1,137 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, 20 ಮಂದಿ ಬಲಿಯಾಗಿದ್ದಾರೆ.
ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದ್ದು, ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 646 ಮಂದಿ ಸೇರಿದಂತೆರಾಜ್ಯದಲ್ಲಿ 1,137 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
ಈ ಮೂಲಕ ಪಾಸಿಟಿವಿಟಿ ದರ 1.43% ಕುಸಿತ ಕಂಡಿದೆ.
ಇನ್ನು ಇಂದು ರಾಜ್ಯದಲ್ಲಿ 13,431 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಾಹಿತಿ ನೀಡಿದೆ.