ನಟ ಚೇತನ್ ಪೋಲೀಸರ ವಶಕ್ಕೆ: ಇತ್ತ ನನ್ನ ಪತಿ ಕಿಡ್ನ್ಯಾಪ್ ಆಗಿದ್ದಾರೆ ಎಂದ ಮೇಘಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನ್ಯಾಯಾಂಗ ನಿಂದನೆ ಆರೋಪದಡಿ ನಟ ಚೇತನ್ ಅನ್ನು ಶೇಷಾದ್ರಿಪುರಂ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಇತ್ತ ಯಾರೋ ಕಿಡ್ನಾಪ್ ಮಾಡಿದ್ದಾರೆ ಎಂದು ಚೇತನ್ ಪತ್ನಿ ಮೇಘಾ ಹೇಳಿಕೊಂಡಿದ್ದಾರೆ.
ಹೈಕೋರ್ಟ್ ನ್ಯಾಯಾಮೂರ್ತಿಗಳ ವಿರುದ್ಧ ಅವಹೇಳನಕಾರಿ ಟ್ಟೀಟ್ ಆರೋಪದಡಿ ನಟ ಚೇತನ್‌ರನ್ನು ಪೊಲೀಸರುವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ನಗರ ಕೇಂದ್ರ ವಿಭಾಗದ ಡಿಸಿಪಿ ಎಮ್ ಎನ್ ಅನುಚೇತ್ ಖಚಿತಪಡಿಸಿದ್ದಾರೆ.
ಇತ್ತ ಫೇಸ್ ಬುಕ್ ಲೈವ್ʼಗೆ ಬಂದ ಚೇತನ್‌ ಪತ್ನಿ ಮೇಘಾ, ಮನೆಯಲ್ಲಿದ್ದವರು ಏಕಾಏಕಿ ಕಾಣಿಸದೇ ಇದ್ದಾಗ, ನಾನು ಮನೆಯಲ್ಲಾ ಹುಡುಕಿದೆ, ಚೇತನ್ ಎಲ್ಲಿ ಎಂದು ಅಲ್ಲೇ ಇದ್ದವರನ್ನ ಕೇಳಿದಾಗ ಪೊಲೀಸ್ʼನವರು ಕರೆದುಕೊಂಡು ಹೋದರು ಎಂದು ಹೇಳಿದರು.ಆದರೆ, ಈ ಕುರಿತು ಪೊಲೀಸರು ಯಾವುದೇ ಮಾಹಿತಿ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚೇತನ್‌ರವರ ಫೋನ್ ಸ್ವಿಚ್ ಆಫ್ ಆಗಿದೆ. ಅವರ ಗನ್‌ಮ್ಯಾನ್ ಫೋನ್‌ಗೆ ಕೂಡ ಸಿಗುತ್ತಿಲ್ಲ. ಇದು ಪೊಲೀಸರು ಮಾಡಿರುವ ಅಪಹರಣವಾಗಿದೆ. ಈ ದೇಶದ ಯಾವುದೇ ಪ್ರಜೆಯನ್ನು ವಿಚಾರಣೆಗಾಗಿ ಕರೆದೊಯ್ಯಬೇಕಾದರೆ ಅವರ ಕುಟುಂಬ ಸದಸ್ಯರಿಗೆ ತಿಳಿಸಬೇಕು, ಮೊದಲೇ ನೋಟಿಸ್ ನೀಡಬೇಕು.ಅವರಿಗೆ ನ್ಯಾಯಾಂಗ ಸಹಾಯ ಪಡೆಯುವ ಹಕ್ಕು ಇದೆ. ಇದನ್ನು ಉಲ್ಲಂಘಿಸಿರುವ ಪೊಲೀಸರು ಉದ್ದೇಶಪೂರ್ವಕವಾಗಿ ಚೇತನ್‌ಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಮೇಘನಾ ಆರೋಪಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!