Sunday, November 2, 2025

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಮುಂಬೈನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ

ಅವರ ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ಅಭಿಮಾನಿಗಳಲ್ಲಿ ಕಳವಳ ಮೂಡಿಸಿದ್ದರೂ, ಹಿರಿಯ ನಟ ಆರೋಗ್ಯವಾಗಿದ್ದಾರೆ ಎಂದು ನಿಕಟ ಮೂಲಗಳು ಸ್ಪಷ್ಟಪಡಿಸಿವೆ.

ಹಿರಿಯ ನಟನನ್ನು ನಿಯಮಿತ ವೈದ್ಯಕೀಯ ಪರೀಕ್ಷೆಗಳಿಗಾಗಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬಕ್ಕೆ ಹತ್ತಿರವಿರುವ ಮೂಲವೊಂದು ಕಳವಳಕ್ಕೆ ಯಾವುದೇ ಕಾರಣವಿಲ್ಲ ಎಂದು ದೃಢಪಡಿಸಿದೆ.

error: Content is protected !!