ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಸುಭಾಷ್ ಗುತ್ತೇದಾರ್‌ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಸಿಸಿಹೆಚ್ 82ರ ಜಡ್ಜ್ ಆದೇಶ ಹೊರಡಿಸಿದ್ದಾರೆ. ಆ ಮೂಲಕ ಬಂಧನ ಭೀತಿಯಿಂದ ಪಾರಾಗಿದ್ದಾರೆ.
ಸಿಐಡಿ ನೋಟಿಸ್ ಹಿನ್ನೆಲೆ ಬಂಧನ ಭೀತಿಯಿಂದ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಸಿಸಿಹೆಚ್ 82ರ ಜಡ್ಜ್ ಸಂತೋಷ್ ಗಜಾನನ ಭಟ್, ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ.
2023ರ ವಿಧಾನಸಭೆ ಚುನಾವಣೆಯಲ್ಲಿ ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ಆರೋಪ ಸಂಬಂಧ ಇತ್ತೀಚೆಗೆ ಎಸ್ಐಟಿ ಅಧಿಕಾರಿಗಳ ತಂಡ ಸುಭಾಷ್ ಗುತ್ತೇದಾರ್ ಮನೆ ಸೇರಿದಂತೆ ಮೂರು ಕಡೆಗಳಲ್ಲಿ ದಾಳಿ ಮಾಡಿತ್ತು.
ಇನ್ನು ಮತಗಳ್ಳತನದ ಬಗ್ಗೆ ಇತ್ತೀಚೆಗಷ್ಟೇ ಸ್ಪಷ್ಟನೆ ಕೊಟ್ಟಿದ್ದ ಸುಭಾಷ್ ಗುತ್ತೇದಾರ್, ಯಾವ ಮತಗಳ್ಳತನವೂ ಆಗಿಲ್ಲ, ಎಲ್ಲವೂ ಸುಳ್ಳು ಅಂದಿದ್ದರು.

