ಮಾನನಷ್ಟ ಮೊಕದ್ದಮೆ ಪ್ರಕರಣ: ನಟಿ ಕಂಗನಾ ರಣಾವತ್ ಗೆ ಸಮನ್ಸ್ ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಬಾಲಿವುಡ್ ನಟಿ ಕಂಗನಾ ರಣಾವತ್ ಗೆ ಪಂಜಾಬ್​ನ ಬಟಿಂಡಾ ನ್ಯಾಯಾಲಯವು ಇಂದು ಸಮನ್ಸ್ ಜಾರಿ ಮಾಡಿದೆ. ಏಪ್ರಿಲ್ 9 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದೆ.
ಕೇಂದ್ರ ಸರ್ಕಾರದ ರೈತವಿರೋಧಿ ನೀತಿ ಖಂಡಿಸಿ ಅಂದು ದೇಶಾದ್ಯಂತ ಪ್ರತಿಭಟನೆ ನಡೆದಿದ್ದು, ಈ ಕುರಿತು ಕಂಗನಾ ಟ್ವೀಟ್‌ ಮಾಡಿದ್ದರು.ಈ ಕುರಿತು ಜ.4 2021 ರಂದು ಮಾನನಷ್ಟ ಮೊಕದ್ದಮೆ ಕೇಸ್​ ಹಾಕಿದ್ದ ಬಹದ್ದೂರ್‌ಘರ್ ಜಾಂಡಿಯಾ, ಮಹಿಂದರ್ ಕೌರ್ ಅವರು ಬಟಿಂಡಾ ನ್ಯಾಯಾಲಯದ ಮೆಟ್ಟಿಲು ಹತ್ತಿದ್ದರು. ಸುಮಾರು 13 ತಿಂಗಳ ಕಾಲ ವಿಚಾರಣೆ ನಡೆದಿದ್ದು, ಇದೀಗ ನ್ಯಾಯಾಲಯವು ಕಂಗನಾಗೆ ಸಮನ್ಸ್ ಜಾರಿ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!