ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಇಂದು ನಮ್ಮ ಹೆಣ್ಣುಮಕ್ಕಳು ಯುದ್ಧ ವಿಮಾನಗಳನ್ನು ಹಾರಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಬಲವಾದ ಸಂದೇಶ ನೀಡಿದ್ದಾರೆ.
ಇಂದು ದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025 ಅನ್ನು ಉದ್ದೇಶಿಸಿ ಮಾತನಾಡಿ ಮೋದಿ, ಪಾಕಿಸ್ತಾನಕ್ಕೆ ಬಲವಾದ ಸಂದೇಶದಲ್ಲಿ ಸ್ಕ್ವಾಡ್ರನ್ ಲೀಡರ್ ಶಿವಾಂಗಿ ಸಿಂಗ್ ಅವರ ಹೆಸರನ್ನು ಉಲ್ಲೇಖಿಸಿದ್ದಾರೆ. ಕೇವಲ 2 ದಿನಗಳ ಹಿಂದೆ ರಾಷ್ಟ್ರಪತಿ ದ್ರೌಪದಿ ಮುರ್ಮು ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದರು. ಅವರ ಜೊತೆ ಸ್ಕ್ವಾಡ್ರನ್ ಲೀಡರ್ ಶಿವಾಂಗಿ ಸಿಂಗ್ ಇದ್ದರು.
ಎರಡು ದಿನಗಳ ಹಿಂದೆ ನಮ್ಮ ರಾಷ್ಟ್ರಪತಿ ದ್ರೌಪದಿ ಮುರ್ಮು ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದರು. ಅವರ ಜೊತೆಗಿದ್ದವರು ಸ್ಕ್ವಾಡ್ರನ್ ಲೀಡರ್ ಶಿವಾಂಗಿ ಸಿಂಗ್. ಇಂದು ನಮ್ಮ ಹೆಣ್ಣುಮಕ್ಕಳು ಯುದ್ಧ ವಿಮಾನಗಳನ್ನು ಹಾರಿಸುತ್ತಿದ್ದಾರೆ. ಡ್ರೋನ್ ದೀದಿಗಳಾಗುವ ಮೂಲಕ ಆಧುನಿಕ ಕೃಷಿಯನ್ನು ಉತ್ತೇಜಿಸುತ್ತಿದ್ದಾರೆ. ಇಂದು, ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಮಹಿಳಾ STEM ಪದವೀಧರರನ್ನು ಹೊಂದಿದೆ ಎಂದು ನಾವು ಹೆಮ್ಮೆಯಿಂದ ಹೇಳಬಹುದು. ಇಂದು, ಮಹಿಳೆಯರು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ನಾಯಕತ್ವದ ಪಾತ್ರಗಳನ್ನು ವಹಿಸುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಈ ಸಂದರ್ಭದಲ್ಲಿ, ಮಹರ್ಷಿ ದಯಾನಂದ ಸರಸ್ವತಿಯವರ 200ನೇ ಜನ್ಮ ದಿನಾಚರಣೆ ಮತ್ತು ಆರ್ಯ ಸಮಾಜದ ಸಮಾಜ ಸೇವೆಯ 150ನೇ ವರ್ಷಾಚರಣೆಯನ್ನು ಗುರುತಿಸುವ ಸ್ಮರಣಾರ್ಥ ಪ್ರಧಾನಿ ಮೋದಿ ನಾಣ್ಯಗಳನ್ನು ಬಿಡುಗಡೆ ಮಾಡಿದರು.

