ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಭಾರತ ವಿರುದ್ದದ ಮೊದಲ ಟಿ. 20 ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಶ್ರೀಲಂಕಾ ಬಾಲಿಂಗ್ ಆಯ್ದುಕೊಂಡಿದೆ.
ವಿಂಡೀಸ್ ವಿರುದ್ದದ ಸರಣಿಯಿಂದ ಹೊರಗುಳಿದಿದ್ದ ಜಸ್ಪ್ರೀತ್ ಬುಮ್ರಾ ಮತ್ತು ಗಾಯದಿಂದ ಮೂರು ತಿಂಗಳ ಕಾಲ ಕ್ರಿಕೆಟ್ನಿಂದ ದೂರವಿದ್ದ ರವೀಂದ್ರ ಜಡೇಜಾ ಮತ್ತೆ ತಂಡ ಸೇರಿಕೊಂಡಿದ್ದಾರೆ. ಸಂಜು ಸಾಮ್ಸನ್ ದೀರ್ಘ ಸಮಯದ ನಂತರ ಭಾರತ ತಂಡಕ್ಕೆ ಕಮ್ಬ್ಯಾಕ್ ಮಾಡಿದ್ದಾರೆ. ಇನ್ನು ವಿಂಡೀಸ್ ವಿರುದ್ಧ ಕೊನೆಯ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ಭುವನೇಶ್ವರ್, ಯುಜ್ವೇಂದ್ರ ಚಹಲ್ ಇಂದು ಕಣಕ್ಕಿಳಿದಿದ್ದಾರೆ
ಭಾರತದ ಪರ ಆಲ್ರೌಂಡರ್ ದೀಪಕ್ ಹೂಡ ಪದಾರ್ಪಣೆ ಮಾಡಿದ್ದಾರೆ. ರುತುರಾಜ್ ಗಾಯಕ್ವಾಡ್ ಮಣಿಕಟ್ಟು ಗಾಯದ ಕಾರಣ ಕೊನೆಯ ಕ್ಷಣದಲ್ಲಿ ಪಂದ್ಯದಿಂದ ಹೊರಗುಳಿದಿದ್ದಾರೆ. ಇಂದಿನ ಪಂದ್ಯದಲ್ಲೂ ಕೂಡ ಇಶಾನ್ ಕಿಶನ್ ನಾಯಕ ರೋಹಿತ್ ಶರ್ಮಾ ಜೊತೆಗೆ ಇನ್ನಿಂಗ್ಸ್ ಆರಂಭಿಸಿದ್ದಾರೆ.