ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು: ಉತ್ಥಾನ ಮಾಸಪತ್ರಿಕೆ ವತಿಯಿಂದ ನಡೆದ ಕಾಲೇಜು ವಿದ್ಯಾರ್ಥಿ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮ ಫೆ. 27ರಂದು ರಾಷ್ಟ್ರೋತ್ಥಾನ ಪರಿಷತ್ನ ಕೇಶವ ಶಿಲ್ಪದಲ್ಲಿ ಜರಗಲಿದೆ.
ಮುಖ್ಯ ಅತಿಥಿಗಳಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ರವಿ ಚನ್ನಣ್ಣನವರ್, ಮುಖ್ಯಮಂತ್ರಿಗಳ ಇ-ಆಡಳಿತ ಸಲಹೆಗಾರ ಬೇಳೂರು ಸುದರ್ಶನ, ಸಾಮಾಜಿಕ ಕಾರ್ಯಕರ್ತ ವಾದಿರಾಜ್, ರಾಷ್ಟ್ರೋತ್ಥಾನ ಪರಿಷತ್ ಪ್ರಧಾನ ಕಾರ್ಯದರ್ಶಿ ನಾ. ದಿನೇಶ್ ಹೆಗ್ಡೆ ಭಾಗವಹಿಸಲಿದ್ದಾರೆ.