ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಕ್ರೇನ್‌ನಲ್ಲಿ ರಷ್ಯ ಮಿಲಿಟರಿ ಕಾರ್ಯಾಚರಣೆ ನಡೆಸುತ್ತಿದ್ದು, ಇತರ ದೇಶಗಳ ಅಂತಾರಾಷ್ಟ್ರೀಯ ಸಂಬಂಧಗಳಲ್ಲಿ ಗಮನಾರ್ಹ ಬದಲಾವಣೆಯಾಗುತ್ತಿದೆ. ಅಮೆರಿಕದ ಮನವಿ ಮೇರೆಗೆ ಸಾಕಷ್ಟು ರಾಷ್ಟ್ರಗಳು ರಷ್ಯಾದ ಮೇಲೆ ನಿರ್ಬಂಧ ಹೇರಿದ್ದು, ಇದೀಗ ತೈವಾನ್ ಕೂಡ ರಷ್ಯಾ ಮೇಲೆ ನಿಬಂಧ ಹೇರಿದೆ.
ಉಕ್ರೇನ್ ಮೇಲೆ ರಷ್ಯ ಆಕ್ರಮಣ ಮಾಡಿದ ಬೆನ್ನಲ್ಲೇ, ಚೀನಾ ಮತ್ತು ತೈವಾನ್ ಸಂಬಂಧದ ಬಗ್ಗೆ ಚರ್ಚೆಯಾಗುತ್ತಿದೆ. ಈ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳದ ತೈವಾನ್ ರಷ್ಯಾ ಮೇಲೆ ನಿರ್ಬಂಧ ಹೇರಿದೆ. ಶಾಂತಿಯುತ ರಾಜತಾಂತ್ರಿಕ ಮಾತುಕತೆಗಳ ಮೂಲಕ ವಿವಾದ ಬಗೆಹರಿಸಿಕೊಳ್ಳಬೇಕಿತ್ತು. ಆದರೆ ರಷ್ಯಾ ಆರಿಸಿರುವ ದಾರಿ ಸರಿಯಲ್ಲ. ಸರ್ಕಾರ ರಷ್ಯಾದ ನಡೆಗೆ ವಿಷಾದ ವ್ಯಕ್ತಪಡಿಸುತ್ತದೆ ಎಂದು ತೈವಾನ್ ವಿದೇಶಾಂಗ ಸಚಿವಾಲಯ ಅಭಿಪ್ರಾಯ ವ್ಯಕ್ತಪಡಿಸಿದೆ.
ರಷ್ಯಾ ಈಗಲೇ ಯುದ್ಧ ನಿಲ್ಲಿಸಬೇಕು. ಉಭಯ ರಾಷ್ಟ್ರಗಳ ನಡುವೆ ಶಾಂತಿ ಮಾತುಕತೆ ನಡೆಯಬೇಕು. ಶಾಂತಿ ಮಾತುಕತೆ ನಡೆಯುವವರೆಗೂ ಅಂತಾರಾಷ್ಟ್ರೀಯ ಆರ್ಥಿಕ ನಿರ್ಬಂಧ ಹೇರಲಾಗುವುದು ಎಂದು ಹೇಳಲಾಗಿದೆ.