ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದ್ದು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಾತ್ರ ಮಳೆಯಾಗುತ್ತಿದೆ. ಇಂದು ಸಹ ಈ ಭಾಗಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಸಂಜೆ ಹಾಗೂ ಮುಂಜಾನೆಯ ವೇಳೆ ಚಳಿಯ ವಾತಾವರಣ ಇರಲಿದೆ ಎಂದು ಇಲಾಖೆ ವರದಿ ಮಾಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
WEATHER | ಸೈಲೆಂಟಾಗೋದ ಮಳೆರಾಯ, ಕೆಲವು ಕಡೆ ಮಾತ್ರ ಜಿಟಿಜಿಟಿ ಹನಿ

