ಹೊಸದಿಗಂತ ವರದಿ, ಮಡಿಕೇರಿ:
ಕೊಡಗು ಜಿಲ್ಲೆಯಲ್ಲಿ ಶುಕ್ರವಾರ 21ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ.
ಮಡಿಕೇರಿ ತಾಲೂಕಿನಲ್ಲಿ 4,ಸೋಮವಾರಪೇಟೆ ತಾಲೂಕಿನಲ್ಲಿ 7ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 10 ಪ್ರಕರಣಗಳು ದೃಢಪಟ್ಟಿವೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 47,605ರಷ್ಟಾಗಿದ್ದು, ಕಳೆದ 24 ಗಂಟೆಗಳಲ್ಲಿ 140 ಮಂದಿ ಗುಣಮುಖರಾಗುವುದರೊಂದಿಗೆ ಇದುವರೆಗೆ ಒಟ್ಟು 46,683ಮಂದಿ ಸೋಂಕು ಮುಕ್ತರಾಗಿದ್ದಾರೆ. ಅಲ್ಲದೆ 450 ಮಂದಿ ಸಾವಿಗೀಡಾಗಿದ್ದಾರೆ.
ಜಿಲ್ಲೆಯಲ್ಲಿ ಪ್ರಸಕ್ತ 472 ಸಕ್ರಿಯ ಪ್ರಕರಣಗಳಿದ್ದು, ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 64 ಹಾಗೂ ಪಾಸಿಟಿವಿಟಿ ಪ್ರಮಾಣ ಶೇ. 1.64ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.