ಹೊಸದಿಗಂತ ವರದಿ, ಶಿವಮೊಗ್ಗ:
ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿಯ ವೇತನ ಪರಿಷ್ಕರಣೆಗಾಗಿ ಅಧಿಕಾರಿಗಳ ವೇತನ ಸಮಿತಿ ರಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಾತ್ವಿಕ ಒಪ್ಪಿಗೆ ಸೂಚಿಸಿರುವುದಾಗಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದ್ದಾರೆ.
ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಿಗಾಗಿ ಏರ್ಪಡಿಸಲಾಗಿದ್ದ 2022-23ನೇ ಸಾಲಿನ ಆಯವ್ಯಯ ಪೂರ್ವಸಿದ್ಧತಾ ಸಭೆಯಲ್ಲಿ ಈ ಭರವಸೆ ನೀಡಿರುವ ಅವರು ಪ್ರಸಕ್ತ ಆಯವ್ಯಯದಲ್ಲಿ ಈ ಬಗ್ಗೆ ಚರ್ಚಿಸವುದಾಗಿ ಭರವಸೆ ನೀಡಿರುವುದಾಗಿ ಹೇಳಿದ್ದಾರೆ.
ಇತ್ತೀಚೆಗೆ ರಾಜಸ್ಥಾನ ಸರ್ಕಾರವು ನೂತನ ಪಿಂಚಣಿ ಯೋಜನೆಯನ್ನುರದ್ದುಗೊಳಿಸಿ ನಿಶ್ಚಿತ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದಾಗಿ ಘೋಷಿಸಿದೆ. ಅದರಂತೆ ತಜ್ಞರಿಂದ ಅಧ್ಯಯನ ನಡೆಸಿ, ಯೋಜನೆಯ ಸಾಧಕ-ಭಾದಕಗಳನ್ನು ಅರಿತು ನೌಕರ ಸ್ನೇಹಿಯಾಗುವಂತೆ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಇಂಗಿತ ವ್ಯಕ್ತಪಡಿಸಿರುವುದಾಗಿ ಹೇಳಿದ್ದಾರೆ.