ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ ಇಂದು ನಿಧನರಾಗಿದ್ದಾರೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಪಟ್ಟಮ್ಮಾಳ್ ವಿಧಿವಶರಾಗಿದ್ದಾರೆ.
ಇಂದು ಬೆಳಗ್ಗೆ ಪಟ್ಟಮ್ಮಾಳ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದು, ರಾಜಾಜಿನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಸಂಜೆಯೇ ಅಂತ್ಯಕ್ರಿಯೆ ನಡೆಯಲಿದೆ ಎಂದು ರವಿಚಂದ್ರನ್ ಕುಟುಂಬದವರು ತಿಳಿಸಿದ್ದಾರೆ.
ರವಿಚಂದ್ರನ್ ಅವರ ತಾಯಿ ನಿಧನಕ್ಕೆ ಕನ್ನಡದ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದು, ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಹೇಳಿದ್ದಾರೆ.