ಮಧ್ಯಪ್ರದೇಶದಲ್ಲಿ ಎರಡು ಪ್ರತ್ಯೇಕ ಅಪಘಾತ: ಐವರ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರದೇಶದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಸೇರಿದಂತೆ ಐವರು ಮೃತಪಟ್ಟಿದ್ದಾರೆ. ಮಹಾರಾಷ್ಟ್ರದಿಂದ ಮಧ್ಯಪ್ರದೇಶದ ಚೌರಗಢ ಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ಜಿರಿಘಾಟ್ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡಿರುವ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದು, ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನೊಂದು ಅಪಘಾತದಲ್ಲಿ ಸ್ಕೂಟಿಯಲ್ಲಿ ಸವಾರಿ ಮಾಡುತ್ತಿದ್ದ ವೇಳೆ ಕಂಟೈನರ್‌ಗೆ ಡಿಕ್ಕಿ ಹೊಡೆದಿರುವ ಪರಿಣಾಮ ತಾಯಿ, ಮಗಳು ಮೃತಪಟ್ಟಿದ್ದಾರೆ. ಮಧ್ಯಪ್ರದೇಶ ಬೇತುಲ್‌ನಲ್ಲಿ ಅವಘಡ ಸಂಭವಿಸಿದೆ. ಮಗಳನ್ನು ಶಾಲೆಗೆ ಬಿಡಲು ತಾಯಿ ಹೊರಟಿದ್ದರು ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!