ಹೊಸದಿಗಂತ ವರದಿ, ಹುಬ್ಬಳ್ಳಿ:
ನಗರದ ಗಬ್ಬರೂ ವೃತ್ತದ ಟ್ರಕ್ ಟರ್ಮಿನಲ್ ಆವರಣದಲ್ಲಿ ಸೋಮವಾರ ಭೂಸಾರಿಗೆ ಹಾಗೂ ಹೆದ್ದಾರಿ ಮಂತ್ರಾಲಯ, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ, ಪಿಎಂ ಗತಿ ಶಕ್ತಿ, ಭಾರತಮಾಲಾ ಹಾಗೂ ಲೋಕೋಪಯೋಗಿ ಇಲಾಖೆಗಳ ಸಹಯೋಗದಲ್ಲಿ ಏರ್ಪಡಿಸಿದ್ದ 12,795 ಕೋಟಿ ರೂ.ವೆಚ್ಚದಲ್ಲಿ 925 ಕಿ.ಮೀ.ಉದ್ದದ ವಿವಿಧ 26 ರಾಷ್ಟ್ರೀಯ ಹೆದ್ದಾರಿಗಳ ಭೂಮಿಪೂಜೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಕೇಂದ್ರ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳು,ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಷಿ, ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ,
ರಾಜ್ಯ ಸರ್ಕಾರದ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ , ಶಾಸಕ ಜಗದೀಶ ಶೆಟ್ಟರ್,ಸಾರಿಗೆ ಮತ್ತು ಎಸ್‌ಟಿ ಕಲ್ಯಾಣ ಸಚಿವ ಬಿ.ಶ್ರೀರಾಮುಲು,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ,ಗಣಿ,ಭೂವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ, ಕೊಪ್ಪಳ ಸಂಸದ ಸಂಗಣ್ಣ ಕರಡಿ,ಬಳ್ಳಾರಿ ಸಂಸದ ವೈ.ದೇವೇಂದ್ರಪ್ಪ,ಹಾವೇರಿ ಸಂಸದ ಶಿವಕುಮಾರ ಉದಾಸಿ,
ಶಾಸಕರಾದ ಪ್ರಸಾದ ಅಬ್ಬಯ್ಯ,ಕಳಕಪ್ಪ ಬಂಡಿ,ಅರವಿಂದ ಬೆಲ್ಲದ, ಅಮೃತ ದೇಸಾಯಿ,ಸಿ.ಎಂ.ನಿಂಬಣ್ಣವರ,ವಿಧಾನ ಪರಿಷತ್ ಸದಸ್ಯರಾದ ಪ್ರದೀಪ ಶೆಟ್ಟರ್,ಎಸ್.ವಿ.ಸಂಕನೂರ,ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಈರಣ್ಣ ಜಡಿ,ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ,ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.