ಹೊಸದಿಗಂತ ಡಿಜಿಟಲ್ ಡೆಸ್ಕ್:
ಐದು ದಿನಗಳ ಹಿಂದಿನಿಂದ ರಷ್ಯಾ ಉಕ್ರೇನ್ ಮೇಲೆ ದಾಳಿ ನಡೆಸುತ್ತಿದ್ದು, ಅರ್ಧ ಮಿಲಿಯನ್‌ಗಿಂತಲೂ ಹೆಚ್ಚು ಜನ ಉಕ್ರೇನ್‌ನಿಂದ ಪಲಾಯನ ಮಾಡಿದ್ದಾರೆ. ಇದರಲ್ಲಿ ಅರ್ಧದಷ್ಟು ಜನ ಪೋಲೆಂಡ್‌ಗೆ ತೆರಳಿದ್ದಾರೆ.
ಐದು ಲಕ್ಷಕ್ಕೂ ಹೆಚ್ಚು ನಿರಾಶ್ರಿತರು ಈಗ ಉಕ್ರೇನ್‌ನಿಂದ ನೆರೆಯ ದೇಶಗಳಿಗೆ ಪಲಾಯನ ಮಾಡಿದ್ದಾರೆ ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಮುಖ್ಯಸ್ಥ ಫಿಲಿಪ್ಪೊ ಗ್ರಾಂಡಿ ತಿಳಿಸಿದ್ದಾರೆ.
ವಿಶ್ವಸಂಸ್ಥೆಯ ನಿರಾಶ್ರಿತರ ಹೈ ಕಮಿಷನ್ ಎಣಿಕೆ ಪ್ರಕಾರ 2,80,೦೦೦ಕ್ಕಿಂತ ಹೆಚ್ಚು ಜನರು ಉಕ್ರೇನ್‌ನಿಂದ ಪೋಲೆಂಡ್‌ವೊಂದಕ್ಕೇ ಪಲಾಯನ ಮಾಡಿದ್ದಾರೆ.