ಕೊಡಗು ಜಿಲ್ಲೆಯಲ್ಲಿ ಭಾನುವಾರ ಶೂನ್ಯಕ್ಕಿಳಿದ ಕೊರೋನಾ ಸೋಂಕು

ಹೊಸದಿಗಂತ ವರದಿ,ಮಡಿಕೇರಿ:

ಹಲವು ತಿಂಗಳುಗಳ ಬಳಿಕ ಇದೇ ಮೊದಲ ಬಾರಿಗೆ ಭಾನುವಾರ ಶೂನ್ಯ ಕೋವಿಡ್ ಪಾಸಿಟಿವಿಟಿ ದರ ದಾಖಲಾಗಿದೆ.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 47,632 ಮಂದಿ ಕೊರೋನಾ ಸೋಂಕಿಗೆ ಒಳಗಾಗಿದ್ದು, ಕಳೆದ 24 ಗಂಟೆಗಳಲ್ಲಿ 98 ಮಂದಿ ಗುಣಮುಖರಾಗಿದ್ದಾರೆ.ಇದರೊಂದಿಗೆ ಇದುವರೆಗೆ ಒಟ್ಟು 47,074ಮಂದಿ‌ ಸೋಂಕು ಮುಕ್ತರಾಗಿದ್ದಾರೆ.ಅಲ್ಲದೆ 451 ಮಂದಿ ಸಾವಿಗೀಡಾಗಿದ್ದಾರೆ.
ಜಿಲ್ಲೆಯಲ್ಲಿ ಪ್ರಸಕ್ತ 107 ಸಕ್ರಿಯ ಪ್ರಕರಣಗಳಿದ್ದು, ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 49ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ.‌ಬಿ.ಸಿ.ಸತೀಶ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!