ಹೊಸದಿಗಂತ ವರದಿ, ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ (ಮಾ.01) ಒಬ್ಬರಿಗೆ ಕೊರೋನಾ ಸೋಂಕು ದೃಢ ಪಟ್ಟಿರುವುದಾಗಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಜಿಲ್ಲೆಗೆ ಇದೊಂದು ಶುಭ ಸುದ್ದಿ. ಎರಡು ವರ್ಷಗಳಲ್ಲಿ ಸೋಂಕಿತರ ಸಂಖ್ಯೆ ಇಷ್ಟು ಇಳಿಮುಖ ಆಗಿರುವುದು ಇದೇ ಮೊದಲು.
ಇದೇ ವೇಳೆ 27 ಮಂದಿ ಮಂಗಳವಾರ ಸೋಂಕು ಮುಕ್ತರಾಗಿದ್ದಾರೆ. ಈ ತನಕ ಜಿಲ್ಲೆಯಲ್ಲಿ 1,33,468 ಮಂದಿ ಕೋವಿಡ್ ಮುಕ್ತರಾಗಿದ್ದಾರೆ. ಮಂಗಳವಾರ ಒಂದು ಸಾವು ಸಂಭವಿಸಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,847 ಕೋವಿಡ್ ಸಾವು ಸಂಭವಿಸಿರುವುದಾಗಿ ಆರೋಗ್ಯ ಇಲಾಖೆ ಹೇಳಿದೆ.
ದಕ್ಷಿಣ ಕನ್ನಡದಲ್ಲಿ ಸಕ್ರಿಯ ಪ್ರಕರಣಗಳು ಎರಡು ಡಿಜಿಟ್ಗೆ ಇಳಿದಿದೆ. ಮಂಗಳವಾರ 92 ಸಕ್ರಿಯ ಪ್ರಕರಣಗಳು ವರದಿಯಾಗಿವೆ. ಪಾಸಿಟಿವಿಟಿ ದರ ಶೇ.0.03ಕ್ಕೆ ಇಳಿದಿದೆ.