Sunday, November 2, 2025

ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌: ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ಶ್ರೇಯಸ್‌ ಅಯ್ಯರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಭಾರತ ಏಕದಿನ ತಂಡದ ನಾಯಕ ಶ್ರೇಯಸ್ ಅಯ್ಯರ್ ಸಿಡ್ನಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಅಯ್ಯರ್ ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚೇತರಿಸಿಕೊಂಡಿರುವ ಅವರು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ.

ಇದಾಗ್ಯೂ ಶ್ರೇಯಸ್ ಅಯ್ಯರ್ ಭಾರತಕ್ಕೆ ಮರಳಲು ಕೆಲ ದಿನಗಳನ್ನು ತೆಗೆದುಕೊಳ್ಳಲಿದ್ದಾರೆ. ಬಿಸಿಸಿಐ ಮೂಲಗಳ ಮಾಹಿತಿ ಪ್ರಕಾರ, ಅಯ್ಯರ್ ಅವರ ಆರೋಗ್ಯವು ಸ್ಥಿರವಾಗಿದ್ದು, ಚೆನ್ನಾಗಿ ಚೇತರಿಸಿಕೊಳ್ಳುತ್ತಿದ್ದಾರೆ.  ಅವರು ಮುಂದಿನ ವೈದ್ಯಕೀಯ ಸಮಾಲೋಚನೆಗಾಗಿ ಸಿಡ್ನಿಯಲ್ಲಿಯೇ ಇರಲಿದ್ದಾರೆ. ಆ ಬಳಿಕ ಅವರು ಪ್ರಯಾಣಿಸಲು ಯೋಗ್ಯರೆಂದು ಪರಿಗಣಿಸಲ್ಪಟ್ಟ ನಂತರ ಭಾರತಕ್ಕೆ ಹಿಂತಿರುಗಲಿದ್ದಾರೆ ಎಂದು ತಿಳಿದು ಬಂದಿದೆ.

error: Content is protected !!