ಹೊಸದಿಗಂತ ವರದಿ, ಕೊಡಗು:
ವ್ಯಕ್ತಿಯೊಬ್ಬರನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಸುಂಟಿಕೊಪ್ಪ ಸಮೀಪದ ಅಂದಗೋವೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿವಾಸಿ ಧರ್ಮ (55) ಎಂಬವರೇ ಗುಂಡೇಟಿಗೆ ಬಲಿಯಾದವರಾಗಿದ್ದು, ಶಿವಕುಮಾರ ಎಂಬವರು ಗುಂಡು ಹಾರಿಸಿರುವುದಾಗಿ ಹೇಳಲಾಗಿದೆ.
ಸುಂಟಿಕೊಪ್ಪ ಠಾಣಾಧಿಕಾರಿ ಕಾವೇರಪ್ಪ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ