ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಇನ್ಮುಂದೆ ಮೆರವಣಿಗೆ, ಪ್ರತಿಭಟನೆಗಳನ್ನು ಫ್ರೀಡಂ ಪಾರ್ಕ್ ಬಿಟ್ಟು ಬೇರೆ ಕಡೆ ಮಾಡುವಂತಿಲ್ಲ ಎಂದು ರಾಜ್ಯ ಹೈಕೋರ್ಟ್ ಸೂಚನೆ ನೀಡಿದೆ.
ಈ ಕುರಿತು ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಎಸ್.ಆರ್ ಕೃಷ್ಣ ಕುಮಾರ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಬೆಂಗಳೂರಿನ ಟ್ರಾಫಿಕ್ ಜಾಮ್ ಗೆ ಸರ್ಕಾರದ ವಿರುದ್ಧ ಗರಂ ಅದ ನ್ಯಾಯಪೀಠವು, ನಗರದಲ್ಲಿನ ಪ್ರತಿಭಟನೆ, ಮೆರವಣಿಗೆ ನಿಲ್ಲಿಸಲು ಸರ್ಕಾರಕ್ಕೆ ಸಾಧ್ಯವಿಲ್ಲವೇ ಎಂದು ಪ್ರಶ್ನಿಸಿತು. ಅಲ್ಲದೇ ಬೆಂಗಳೂರಿನ ಜನ ಹೀಗೆ ಟ್ರಾಫಿಕ್ ಸಮಸ್ಯೆ ಆದ್ರೇ ಕೆಲಸಕ್ಕೆ ಹೋಗೋದು ಹೇಗೆ.? ಇದೇನೂ ಮೊದಲೇನು ಅಲ್ಲ ನಡೆಯುತ್ತಿರೋದು, ಈ ಹಿಂದೆಯೂ ನಡೆದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿತು.
ಹೀಗಾಗಿ ಬೆಂಗಳೂರಿನಲ್ಲಿ ಬೇರೆಲ್ಲೂ ಪ್ರತಿಬಟನೆ, ಮೆರವಣಿಗೆ ನಡೆಸದಂತೆ ಆದೇಶಿಸಿದ ಹೈಕೋರ್ಟ್ ನ್ಯಾಯಪೀಠವು, ಕೇವಲ ಫ್ರೀಡಂ ಪಾರ್ಕ್ ನಲ್ಲಿ ಮಾತ್ರವೇ ನಡೆಸೋದಕ್ಕೆ ಅವಕಾಶ ನೀಡಿದೆ.
ನಿಗದಿತ ಸ್ಥಳದ ಹೊರತಾಗಿ ಬೇರೆಲ್ಲಿಯೂ ಬೆಂಗಳೂರಿನಲ್ಲಿ ಪ್ರತಿಭಟನೆ, ಮೆರವಣಿಗೆ ನಡೆಸೋದಕ್ಕೆ ಸರ್ಕಾರ ಅವಕಾಶ ನೀಡಬಾರದು. ಅದು ಯಾವುದೇ ಸಂಘಟನೆ, ಪಕ್ಷವಾಗಿರಲಿ, ನಿಗದಿತ ಸ್ಥಳ ಬಿಟ್ಟು ಬೇರೆ ಕಡೆ ಪ್ರತಿಭಟನೆ ನಡೆಸುವಂತಿಲ್ಲ ಎಂಬುದಾಗಿ ಮಹತ್ವದ ಆದೇಶವನ್ನು ಹೊರಡಿಸಿದೆ.
ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆಯಿಂದ ಬೆಂಗಳೂರಿನ ಮೇಖ್ರಿ ಸರ್ಕಲ್, ಅರಮನೆ ಮೈದಾನ ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿ, ವಾಹನ ಸವಾರರು ಪರದಾಟುವಂತೆ ಆಗಿತ್ತು.ಇದರಿಂದ ಜನಸಾಮಾನ್ಯರು ಟ್ರಾಫಿಕ್ ಜಾಮ್ ನಲ್ಲಿ ಸಿಲುಕೊಂಡರು. ಅದರಲ್ಲೂ ಹೈಕೋರ್ಟ್ ನ್ಯಾಯಮೂರ್ತಿಗಳು ಕೂಡ, ನ್ಯಾಯಗ್ರಾಮದಿಂದ ಕೋರ್ಟ್ ತಲುಪೋದಕ್ಕೆ 1 ಗಂಟೆ ಟ್ರಾಫಿಕ್ ಎದುರಿಸಿದರು. ಈ ಹಿನ್ನೆಲೆ ಹೈಕೋರ್ಟ್ ಈ ಆದೇಶ ಹೊರಡಿಸಿದೆ.