ಹೊಸದಿಗಂತ ಡಿಜಿಟಲ್ ಡೆಸ್ಕ್:
100 ಟೆಸ್ಟ್ ಪಂದ್ಯಗಳನ್ನು ಆಡುವ ಬಗ್ಗೆ ನಾನೆಂದೂ ಯೋಚಿಸಿರಲಿಲ್ಲ. ಇದೊಂದು ಸುದೀರ್ಘ ಪ್ರಯಾಣ ಎಂದು ವಿರಾಟ್ ಕೊಹ್ಲಿ ತಮ್ಮ ಮನದಾಳದ ಮಾತುಗಳನ್ನಾಡಿದ್ದಾರೆ.
ಶುಕ್ರವಾರದಿಂದ ಶ್ರೀಲಂಕಾ ವಿರುದ್ಧ ಆರಂಭವಾಗಲಿರುವ ಟೆಸ್ಟ್ ಪಂದ್ಯ ಕೊಹ್ಲಿ ಪಾಲಿಗೆ ಅಚ್ಚರಿಯ ನೆನಪಿಡುವ ಪಂದ್ಯ. ಕಾರಣ ಅವರ ಜೀವನದ 100ನೇ ಟೆಸ್ಟ್ ಪಂದ್ಯವನ್ನಾಡಲಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಆ 100 ಟೆಸ್ಟ್ ಪಂದ್ಯಗಳನ್ನು ಆಡುವ ಅವಧಿಯಲ್ಲಿ ನಾವು ಸಾಕಷ್ಟು ಕ್ರಿಕೆಟ್ ಆಡಿದ್ದೇವೆ. ಅದರಲ್ಲಿ ಸಾಕಷ್ಟು ಅಂತಾರಾಷ್ಟ್ರೀಯ ಕ್ರಿಕೆಟ್ ಕೂಡ ಇದೆ. ನಾನು 100 ಟೆಸ್ಟ್ ಪಂದ್ಯಗಳನ್ನು ಆಡಲು ಸಾಧ್ಯವಾಗಿದ್ದಕ್ಕೆ ಕೃತಜ್ಞನಾಗಿರುತ್ತೇನೆಎಂದು ಬಿಸಿಸಿಐ ಟ್ವಿಟರ್ನಲ್ಲಿ ಹಂಚಿಕೊಂಡಿರುವ ವಿಡಿಯೊದಲ್ಲಿ ಹೇಳಿದರು.
2011ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ತಮ್ಮ ಮೊದಲ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ ಕೊಹ್ಲಿ, ದಶಕದ ಸುದೀರ್ಘ ಪಯಣದಲ್ಲಿ 50.39ರ ಸರಾಸರಿಯಲ್ಲಿ 7,962 ರನ್ಗಳಿಸಿದ್ದಾರೆ.
'I never thought i'll play 100 Test matches. It has been a long journey. Grateful that i've been able to make it to 100' – @imVkohli on his landmark Test.
Full interview coming up on https://t.co/Z3MPyesSeZ. Stay tuned! #VK100 pic.twitter.com/SFehIolPwb
— BCCI (@BCCI) March 3, 2022