ರಾಜ್ಯದ ಆರೋಗ್ಯಕ್ಕೆ ಆಯವ್ಯಯ ಆತುಕೊಂಡಿರುವುದು ಹೇಗೆ?

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು: ಎರಡು ವರ್ಷಗಳಿಂದ ಸಾಂಕ್ರಾಮಿಕ ವ್ಯಾಧಿಯಿಂದ ತತ್ತರಿಸಿದ ನಂತರ ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆಗಳಾಗುತ್ತಿವೆ. ಈ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಚೊಚ್ಚಲ ಬಜೆಟ್‌ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಅನೇಕ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

ಬೆಂಗಳೂರಿನ ಎಲ್ಲಾ ವಾರ್ಡ್ ಗಳಲ್ಲಿ ಹಾಗೂ ರಾಜ್ಯದ ಪ್ರಮುಖ ನಗರಗಳಲ್ಲಿ ಅಸಾಂಕ್ರಾಮಿಕ ರೋಗಗಳ ತಪಾಸಣೆಗೆ ಒಟ್ಟು 438 ‘ನಮ್ಮ ಕ್ಲಿನಿಕ್’ಗಳ ಸ್ಥಾಪನೆ.

• ರಾಜ್ಯದಲ್ಲಿ ಮಹಿಳಾ ಆರೋಗ್ಯ ಸಮಸ್ಯೆಗಳಿಗೆ ಸಲಹೆ ನೀಡಲು 300 ಮಹಿಳಾ ಸ್ವಾಸ್ಥ್ಯ ಕೇಂದ್ರಗಳ ಸ್ಥಾಪನೆ.

• ಬಡ ಹಿರಿಯ ನಾಗರಿಕರಿಗೆ ಯೋಜನೆಯಡಿ ಉಚಿತ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸೆ ಮತ್ತು ಕನ್ನಡಕ ಸೌಲಭ್ಯ.

• ಹುಬ್ಬಳ್ಳಿಯಲ್ಲಿ 250 ಕೋಟಿ ರೂ. ವೆಚ್ಚದಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಹೃದ್ರೋಗ ಕೇಂದ್ರ ಸ್ಥಾಪನೆ.

• ಬೆಳಗಾವಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರ ಸ್ಥಾಪನೆ.

• ಆಯ್ದ 10 ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಕ್ಯಾನ್ಸರ್ ರೋಗಿಗಳಿಗೆ ಕಿಮೋಥೆರಪಿ ನೀಡುವ Infusion Center ಗಳನ್ನು ಸ್ಥಾಪಿಸಲಾಗುವುದು.

• ಏಳು ತಾಲೂಕು ಆಸ್ಪತ್ರೆಗಳು 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೆ.

• ತುಮಕೂರಿನಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಟ್ರಾಮಾ ಕೇರ್ ಕೇಂದ್ರ ಸ್ಥಾಪನೆ; 2022-23ರಲ್ಲಿ 10 ಕೋಟಿ ರೂ. ಅನುದಾನ.

• ಶ್ರೀಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯೊಂದಿಗೆ 75 ತಾಲೂಕು ಆಸ್ಪತ್ರೆಗಳ ಮ್ಯಾಪಿಂಗ್, ತಾಲೂಕು ಮಟ್ಟದಲ್ಲಿ ಹೃದಯ ಸಂಬಂಧಿ ಚಿಕಿತ್ಸೆ.

• ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳನ್ನು ಜಿಲ್ಲಾ ಮಟ್ಟದಲ್ಲಿ ಪ್ರಾರಂಭಿಸಲು ಅನುವಾಗುವಂತೆ 200ಕ್ಕೂ ಹೆಚ್ಚು ಹಾಸಿಗೆಗಳ ಸಾಮರ್ಥ್ಯವಿರುವ ಸರಕಾರಿ ಆಸ್ಪತ್ರೆಗಳನ್ನು ಎನ್.ಎಂ.ಸಿ.ಯ ಅನುಮೋದನೆ ಪಡೆದು ಬೋಧನಾ ಆಸ್ಪತ್ರೆಗಳಾಗಿ ಪರಿವರ್ತನೆ; ಈ ವರ್ಷ ತುಮಕೂರು ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್ ಪ್ರಾರಂಭ.

• ‘ಮುಖ್ಯಮಂತ್ರಿ ಆರೋಗ್ಯ ವಾಹಿನಿ’ ಯೋಜನೆಯಡಿ ಮನೆ ಬಾಗಿಲಿಗೆ ವೈದ್ಯಕೀಯ ಸೇವೆ ಒದಗಿಸಲು ಬೀದರ್, ಚಾಮರಾಜನಗರ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಂಚಾರಿ ಕ್ಲಿನಿಕ್ ಪ್ರಾರಂಭ.

• ಸವಣೂರಿನಲ್ಲಿ ಹೊಸ ಆಯುರ್ವೇದ ಕಾಲೇಜು ಸ್ಥಾಪನೆ.

• ಬಡವರಿಗೆ ವೈದ್ಯಕೀಯ ಶಿಕ್ಷಣ ಅವಕಾಶ ಒದಗಿಸಲು ಕೈಗೊಳ್ಳುವ ಕ್ರಮಗಳು:
1. ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ನೀಟ್ ಪರೀಕ್ಷೆಗೆ ತರಬೇತಿ.
2. ಸರಕಾರಿ ಕೋಟಾದಡಿ ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆಯುವ ಬಡ ವಿದ್ಯಾರ್ಥಿಗಳಿಗೆ ಬ್ಯಾಂಕುಗಳಿಂದ ಶೈಕ್ಷಣಿಕ ಸಾಲ ಒದಗಿಸಲು ನೆರವು.
3. ಖಾಸಗಿ ವೈದ್ಯಕೀಯ ಕಾಲೇಜುಗಳ ವರ್ಗೀಕರಣ ಹಾಗೂ ಶುಲ್ಕ ನಿಯಂತ್ರಣ ಸಮಿತಿಯ ಮೂಲಕ ಶುಲ್ಕ ನಿಗದಿಪಡಿಸಲು ಕ್ರಮ
4. ಅಪೌಷ್ಟಿಕತೆ ನಿವಾರಣೆಗೆ ಒತ್ತು

• ಪೌಷ್ಟಿಕ ಕರ್ನಾಟಕ ಯೋಜನೆಯಡಿ 93 ಕೋಟಿ ರೂ. ವೆಚ್ಚದಲ್ಲಿ ಪ್ರಾಯೋಗಿಕವಾಗಿ ರಾಜ್ಯದ 14 ಜಿಲ್ಲೆಗಳಲ್ಲಿ ಸಾರವರ್ಧಿತ ಅಕ್ಕಿ ವಿತರಣೆ.

• ಬಾಲ್ಯವಿವಾಹ ಹಾಗೂ ಹೆಣ್ಣುಮಕ್ಕಳು ಶಾಲೆಬಿಡುವುದನ್ನು ತಪ್ಪಿಸಿ, ಅಪೌಷ್ಟಿಕತೆ ನಿವಾರಿಸುವ ‘ಸ್ಫೂರ್ತಿ’ ಯೋಜನೆ ರಾಜ್ಯಾದ್ಯಂತ ವಿಸ್ತರಣೆ.

• ಹಲವಾರು ವರ್ಷಗಳ ಹಿಂದೆ ಘೋಷಣೆಯಾಗಿ ನೆನೆಗುದಿಗೆ ಬಿದ್ದಿರುವ ರಾಮನಗರದ ಅರ್ಚಕರಹಳ್ಳಿ ಗ್ರಾಮದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕ್ಯಾಂಪಸ್‌ 600 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!