ಸರ್ವಜನಾಂಗಕೂ ಬಜೆಟ್ಟಿನ ಕೋಟಾ

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳು ಮತ್ತು ಅಲ್ಪ ಸಂಖ್ಯಾತರ ಅಭಿವೃದ್ಧಿಗೆ 2022-23ನೇ ಆಯವ್ಯಯದಲ್ಲಿ ಸಾಕಷ್ಟು ಯೋಜನೆ-ಕಾರ್ಯಕ್ರಮಗಳನ್ನು ಒದಗಿಸಿದ್ದಾರೆ.

• ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಅಭಿವೃದ್ಧಿ ನಿಗಮಗಳ ಯೋಜನೆಗಳಿಗೆ 800 ಕೋಟಿ ರೂ.

• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಇತರೆ ವರ್ಗದ ಮಕ್ಕಳಿಗಾಗಿ 250 ಕೋಟಿ ರೂ. ವೆಚ್ಚದಲ್ಲಿ ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು ಮತ್ತು ಮೈಸೂರಿನಲ್ಲಿ ತಲಾ 1000 ಸಾಮರ್ಥ್ಯದ ಬಹುಮಹಡಿಯ ದೀನ್‍ದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿ ನಿಲಯ ಸಮುಚ್ಛಯ ನಿರ್ಮಾಣ.

• ಪ್ರತಿ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಒಂದು ಶಾಲೆಯನ್ನು ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಯಾಗಿ ಮರುನಾಮಕರಣ; ಪದವಿ ಪೂರ್ವ ತರಗತಿ ಪ್ರಾರಂಭ; ಸಿಬಿಎಸ್‍ಇ ಮಾನ್ಯತೆ ಪಡೆಯಲು ಕ್ರಮ. 25 ಕೋಟಿ ರೂ. ಅನುದಾನ.

• ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದು ಶ್ರೀನಾರಾಯಣ ಗುರು ವಸತಿ ಶಾಲೆ ಪ್ರಾರಂಭ.

• ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳ ಅಡಿಯಲ್ಲಿರುವ ಎಲ್ಲಾ ಅಭಿವೃದ್ಧಿ ನಿಗಮಗಳ ಸ್ವಯಂ ಉದ್ಯೋಗ ಮತ್ತು ಇತರೆ ಕಾರ್ಯಕ್ರಮಗಳ ಗುರಿಯಲ್ಲಿ ಶೇ.25ರಷ್ಟು ಮಹಿಳೆಯರಿಗೆ ಮೀಸಲು.

• ಗಂಗಾ ಕಲ್ಯಾಣ ಯೋಜನೆಯಲ್ಲಿ ಸುಧಾರಣೆ; ಬೋರ್ ವೆಲ್ ಕೊರೆಯಲು ಡಿ.ಬಿ.ಟಿ. ಮೂಲಕ ಹಣ ವರ್ಗಾವಣೆ; ವಿದ್ಯುದ್ದೀಕರಣ ಶುಲ್ಕ ಸರಕಾರದಿಂದ ಪಾವತಿ. 2022-23ರಲ್ಲಿ ಒಟ್ಟಾರೆ
1,115 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನ.

• ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ಸಮುದಾಯಗಳ ನಿಗಮಗಳಡಿ 400 ಕೋಟಿ ರೂ. ಅಭಿವೃದ್ಧಿ ಯೋಜನೆ. ದೇವರಾಜ ಅರಸು ಅಭಿವೃದ್ಧಿ ನಿಗಮದಡಿ ಬರುವ ಇತರ ಹಿಂದುಳಿದ ಸಮುದಾಯಗಳಿಗೆ 400 ಕೋಟಿ ರೂ. ಯೋಜನೆ

• ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಹಾಗೂ ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ ತಲಾ 100 ಕೋಟಿ ರೂ. ಯೋಜನೆ.

• ಮರಾಠಾ ಅಭಿವೃದ್ಧಿ ನಿಗಮದ ಕಾರ್ಯಕ್ರಮಗಳಿಗೆ 50 ಕೋಟಿ ರೂ.

• ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ 50 ಕೋಟಿ ರೂ. ಯೋಜನೆ ಹಾಗೂ ಜೈನ, ಸಿಖ್ ಮತ್ತು ಬೌದ್ಧ ಸಮುದಾಯಗಳ ಅಭಿವೃದ್ಧಿಗೆ 50 ಕೋಟಿ ರೂ. ಯೋಜನೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!