Wednesday, November 12, 2025

ಪಾಕಿಸ್ತಾನಿ ಸೈನಿಕರ ಮೇಲೆ ಬಲೂಚ್ ಲಿಬರೇಶನ್ ಆರ್ಮಿ ದಾಳಿ: 9 ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:


ಪಾಕಿಸ್ತಾನಿ ಸೈನಿಕರ ಮೇಲೆ ಬಲೂಚ್ ಲಿಬರೇಶನ್ ಆರ್ಮಿ ಏಕಾಏಕಿ ದಾಳಿ ನಡೆಸಿದ್ದು, 9 ಮಂದಿ ಸಿಬ್ಬಂದಿ ಸಾವನ್ನಪ್ಪಿದ್ದಾರೆ.

ಬಲೂಚಿಸ್ತಾನದ ಕಲಾತ್ ಜಿಲ್ಲೆಯಲ್ಲಿ ಬಲೂಚ್ ಲಿಬರೇಶನ್ ಆರ್ಮಿಯು ದಾಳಿ ನಡೆಸಿದೆ. ಭದ್ರತಾ ಪಡೆಗಳ ಬೆಂಗಾವಲು ಪಡೆಯನ್ನು ಗುರಿಯಾಗಿಸಿಕೊಂಡು ನಡೆಸಿದ ಸಂಘಟಿತ ದಾಳಿಯಲ್ಲಿ ಹೋರಾಟಗಾರರು ಸ್ನೈಪರ್‌ಗಳು ಮತ್ತು ಆರ್‌ಪಿಜಿಗಳು ಸೇರಿದಂತೆ ಅತ್ಯಾಧುನಿಕ ತಂತ್ರಗಳನ್ನು ಬಳಸಲಾಗಿತ್ತು. ಈ ದಾಳಿಯಲ್ಲಿ ಎರಡು ಮಿಲಿಟರಿ ವಾಹನಗಳು ತೀವ್ರವಾಗಿ ಹಾನಿಗೊಳಗಾಗಿವೆ.

ಈ ದಾಳಿಯಲ್ಲಿ ಗಣ್ಯ ವಿಶೇಷ ಸೇವೆಗಳ ಗುಂಪಿನ (ಎಸ್‌ಎಸ್‌ಜಿ) ಇಬ್ಬರು ಕಮಾಂಡೋಗಳು ಸೇರಿದಂತೆ ಒಂಬತ್ತು ಭದ್ರತಾ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಬಲೂಚ್ ಲಿಬರೇಶನ್ ಆರ್ಮಿಯ ಸಂಘಟಿತ ದಾಳಿಯನ್ನು ಭದ್ರತಾ ಪಡೆಗಳ ಬೆಂಗಾವಲು ಪಡೆಯನ್ನು ಗುರಿಯಾಗಿಸಿಕೊಂಡೇ ನಡೆಸಲಾಗಿದೆ. ಇದರಲ್ಲಿ ಹೋರಾಟಗಾರರು ಸ್ನೈಪರ್‌ಗಳು, ರಾಕೆಟ್ ಪ್ರೊಪೆಲ್ಡ್ ಗ್ರೆನೇಡ್‌ಗಳು (ಆರ್‌ಪಿಜಿಗಳು) ಸೇರಿದಂತೆ ಅತ್ಯಾಧುನಿಕ ತಂತ್ರಗಳನ್ನು ಬಳಸುತ್ತಿದ್ದರು. ಆರ್‌ಪಿಜಿ ದಾಳಿಯಲ್ಲಿ ಎರಡು ಮಿಲಿಟರಿ ವಾಹನಗಳು ತೀವ್ರವಾಗಿ ಹಾನಿಗೊಳಗಾದವು ಎಂದು ಬಲೂಚ್ ಲಿಬರೇಶನ್ ಆರ್ಮಿ ತಿಳಿಸಿದೆ.

error: Content is protected !!